Advertisement

ಕಾಶಿ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿರುವ ಪೇಜಾವರ ಶ್ರೀ

01:57 PM Dec 12, 2021 | Team Udayavani |

ಉಡುಪಿ : ಡಿ .13 ರಂದು ಹಿಂದೂಗಳ ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆಯಲಿರುವ ಐತಿಹಾಸಿಕ ಎನ್ನಬಹುದಾದ ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರಗಳ ಮಹತ್ವಾಕಾಂಕ್ಷಿ ಯೋಜನೆ ಕಾಶಿ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಲಿದ್ದಾರೆ .

Advertisement

ಈ ಕಾರ್ಯಕ್ರಮದಲ್ಲಿ ದೇಶದ ಪ್ರಮುಖ ಸಾಧು ಸಂತರನ್ನು ಆಹ್ವಾನಿಸುವಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ, ಯೋಗಿಯವರು ಪೇಜಾವರ ಶ್ರೀಗಳಿಗೆ ದೂರವಾಣಿ ಕರೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದರು.

ಆಹ್ವಾನದ ಹಿನ್ನಲೆಯಲ್ಲಿ ಶ್ರೀಗಳು ಭಾನುವಾರ ರಾತ್ರಿ ಮಂಗಳೂರಿನಿಂದ ಮುಂಬಯಿಗೆ ತೆರಳಿ ಸೋಮವಾರ ಮುಂಜಾನೆ ಮಠದ ಪಟ್ಟದ ದೇವರ ಪೂಜಾದಿಗಳನ್ನು ಶಾಖಾ ಮಠದಲ್ಲೇ ಪೊರೈಸಿ, ಕಾಶಿಗೆ ತೆರಳಲಿರುವರು ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ .

ರಾಜ್ಯದಿಂದ ಶ್ರೀ ರವಿಶಂಕರ್ ಗುರೂಜಿಯವರಿಗೂ ಆಹ್ವಾನ ಬಂದಿರವ ಬಗ್ಗೆ ಮಾಹಿತಿ ಇದೆ. ಅಲ್ಲದೇ ದೇಶಾದ್ಯಂತ ಇರುವ ಅನೇಕ ಪ್ರಮುಖ ಸಾಧು ಸಂತರನ್ನು ಆಹ್ವಾನಿಸಲಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ರ ಕಚೇರಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next