Advertisement

ಗುರುಗಳ ಪದ್ಮವಿಭೂಷಣ ಸ್ವೀಕರಿಸಿದ ವಿಶ್ವ ಪ್ರಸನ್ನ ತೀರ್ಥರು

07:50 PM Nov 08, 2021 | Team Udayavani |

ಹೊಸದಿಲ್ಲಿ :ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ನೀಡಲಾಗಿರುವ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಗೆ ಪ್ರದಾನ ಮಾಡಿದರು.

Advertisement

2019 ರ ಡಿಸೆಂಬರ್ 29 ರಂದು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹರಿಪಾದ ಸೇರಿದ್ದರು.

ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು  ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next