ಸೋಮವಾರ ಸಂಜೆ ಮಿಂಚಿನ ಸಂಚಾರ ಕೈಗೊಂಡು ನಿವಾಸಿಗಳನ್ನು ಪುಳಕಿತಗೊಳಿಸಿದರು.
Advertisement
ಹಿಂದೂ ಸಮಾಜದಲ್ಲಿ ಆಂತರಿಕವಾಗಿ ಬಾಂಧವ್ಯ ಮತ್ತು ಸಾಮರಸ್ಯವನ್ನು ಸುದೃಡಗೊಳಿಸುವ ಧರ್ಮ ಜಾಗೃತಿಯನ್ನು ಮೂಡಿಸುವ ಸಲುವಾಗಿ ತಮ್ಮ 36 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಹಮ್ಮಿಕೊಂಡ ಹತ್ತಾರು ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳ ಬಡಾವಣೆಗಳಿಗೆ ಸಾಮರಸ್ಯದ ನಡಿಗೆಯನ್ನು ಆದ್ಯತೆಯಲ್ಲಿ ಹಮ್ಮಿಕೊಳ್ಳುವಂತೆ ಚಾತುರ್ಮಾಸ್ಯ ಸಮಿತಿಗೆ ಸೂಚಿಸಿದ್ದರು .ಅದರಂತೆ ಮೈಸೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧರ್ಮಜಾಗರಣ ವಿಭಾಗ ಮತ್ತು ಸಾಮರಸ್ಯ ವೇದಿಕೆಗಳ ಜಂಟಿ ಸಂಯೋಜನೆಯಲ್ಲಿ ಬಿ ಬಿ ಕೇರಿ ಬಡಾವಣೆಗೆ ತೆರಳಿದರು .
Related Articles
Advertisement
ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ತನಕ ಪ್ರತೀ ದಿನ ಸಂಜೆ ರಾಮದೀಪ ಬೆಳಗಿ ರಾಮಮಂತ್ರ ಜಪ ಮಾಡಿ ಪ್ರಾರ್ಥಿಸುವಂತೆ ಸೂಚಿಸಿದರು . ಮಕ್ಕಳಿಗೆ ಉತ್ತಮ ಶಿಕ್ಷಣ , ಸಂಸ್ಕಾರಗಳನ್ನು ನೀಡಬೇಕು .ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ನಾವೆಲ್ಲ ನಮ್ಮ ನಮ್ಮಕೇರಿ ಬಡಾವಣೆಗಳಲ್ಲೂ ಸಾಮರಸ್ಯ ಐಕಮತ್ಯ ಮತ್ತು ಧರ್ಮ ಪ್ರಜ್ಞೆಯನ್ನು ಉಳಿಸಿ ಒಗ್ಗಟ್ಟಿನಿಂದ ಶಾಂತಿ ನೆಮ್ಮದಿಯಿಂದ ಜೀವಿಸಬೇಕಾಗಿದೆ .ಇದೇ ಹಿಂದೂ ಸಮಾಜದ ಶಕ್ತಿಯಾಗಿದೆ . ಅದನ್ನುಳಿಸುವುದು ನಮ್ಮ ಕರ್ತವ್ಯವೂ ಆಗಿದೆ ಎಂದರು .
ಎಲ್ಲ ಮನೆಗಳಲ್ಲಿ ದೇವರ ಅತ್ಯಂತ ಸ್ವಚ್ಛ ಮತ್ತು ಸುಂದರವಾಗಿ ದೇವರಿಗಾಗಿ ಪ್ರತ್ಯೇಕ ಜಾಗವನ್ನು ಮೀಸಲಿಟ್ಟು ದೇವ ದೇವತೆಯರ ಚಿತ್ರ ಮೂರ್ತಿ ಕಲಶ ಗಳನ್ನಿಟ್ಟು ಅತ್ಯಂತ ಶ್ರದ್ಧೆಯಿಂದ ಪೂಜಿಸಿಕೊಂಡು ಬರುತ್ತಿರುವುದನ್ನು ಕಂಡು ಅತ್ಯಂತ ಸಂತಸಪಟ್ಟರು . ಬಳಿಕ ಕೇರಿಯ ಪಟ್ಟಾಲದಮ್ಮ ದೇವಿ ಮಂದಿರಕ್ಕೆ ಭೇಟಿ ನೀಡಿ ಆರತಿ ಬೆಳಗಿದರು . ಎಲ್ಲ ಮನೆಗಳಿಗೂ ಶ್ರೀ ಕೃಷ್ಣನ ಸಿಹಿತಿಂಡಿ ಪ್ರಸಾದಗಳನ್ನು ವಿತರಿಸಿದರು .
ಸಾಮಾಜಿಕ ನ್ಯಾಯ ವೇದಿಕೆಯ ಡಾ ಆನಂದ್ ಕುಮಾರ್ , ಸ್ಥಳೀಯರಾದ ನಾಗೇಂದ್ರ , ಧರ್ಮ ಜಾಗರಣದ ವಾಮನ್ ರಾವ್ , ನಿತ್ಯಾನಂದ ಗಿರೀಶ , ಮೊದಲಾದವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದ್ದರು .ಪುತ್ತೂರಿನ ಹಿಂದೂ ನೇತಾರ ಅರುಣ ಕುಮಾರ ಪುತ್ತಿಲ , ಚಾತುರ್ಮಾಸ್ಯ ಸಮಿತಿಯ ಪ್ರಮುಖರಾದ ಎಂ ಕೃಷ್ಣರಾಜ ಪುರಾಣಿಕ , ರವಿ ಶಾಸ್ತ್ರಿ , ಶ್ರೀಗಳ ಆಪ್ತರಾದ ವಿಷ್ಣು ಆಚಾರ್ಯ , ಕೃಷ್ಣ ಭಟ್ , ವಾಸುದೇವ ಭಟ್ , ಶ್ರೀನಿವಾಸ ಪ್ರಸಾದ್ , ಮೊದಲಾದವರಿದ್ದರು .ಶ್ರೀಗಳವರ ಶಾಸ್ತ್ರ ವಿದ್ಯಾರ್ಥಿಗಳೂ ಆಗಮಿಸಿ ಸಹಕರಿಸಿದರು .