Advertisement

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

11:46 PM May 16, 2022 | Team Udayavani |

ಉಡುಪಿ : ವಿವಾದಿತ ಸ್ಥಳಗಳು, ಹಿಂದೂ ಪೂಜಾ ಮಂದಿರಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು. ಮುಸ್ಲಿಮರ ದರ್ಗಾ ಆಗಿದ್ದರೆ ಮುಸಲ್ಮಾನರಿಗೆ ಬಿಟ್ಟು ಕೊಡಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘರ್ಷಕ್ಕೆ ಇಳಿಯದೆ ಸೌಹಾರ್ದದಿಂದ ಮಂದಿರ ಬಿಟ್ಟು ಕೊಡಬೇಕು. ಯಾವುದೋ ಕಾಲಘಟ್ಟದಲ್ಲಿ ನಮ್ಮ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿವೆ. ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ಆಕ್ಷೇಪವಿರಲಿಲ್ಲ. ಆದರೆ ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾಗಿರುವುದು ಅನಿವಾರ್ಯ ಎಂದರು.

ಸುಪ್ರೀಂ ಕೋರ್ಟ್‌ ಧಾರ್ಮಿಕ ಮಂದಿರಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮಾರ್ಗದರ್ಶನ ಮಾಡಿದೆ. ನಿಯಮ ಪಾಲಿಸಲು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ. ವಿಶೇಷ ಆಚರಣೆ ಸಂದರ್ಭ ಸಂಬಂಧ ಪಟ್ಟ ಇಲಾಖೆ ಮೂಲಕ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ. ನ್ಯಾಯಾಲಯದ ತೀರ್ಪು ಎಲ್ಲರೂ ಪಾಲಿಸಬೇಕಿದ್ದು, ಸುಪ್ರೀಂ ಕೋರ್ಟ್‌ ಮಾರ್ಗದರ್ಶನದಂತೆ ನಡೆಯುವುದು ಸೂಕ್ತ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next