Advertisement

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

09:51 AM Dec 28, 2019 | Hari Prasad |

ಉಡುಪಿ: ನ್ಯುಮೋನಿಯಾ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿರುವ ಉಡುಪಿಯ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯದಲ್ಲಿ ಗಂಭೀರ ಸ್ವರೂಪದ ವ್ಯತ್ಯಯ ಉಂಟಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಮಾಹಿತಿ ನೀಡಿದೆ.

Advertisement

ಶ್ರೀಗಳ ಆರೋಗ್ಯ ಸ್ಥಿತಿಯ ಕುರಿತಾಗಿ ಪ್ರತೀದಿನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವಂತೆ ಇಂದೂ ಸಹ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದ್ದು ಅದರಲ್ಲಿ ತಿಳಿಸಿರುವಂತೆ, ‘ಸ್ವಾಮೀಜಿಯವರ ಆರೊಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಅವರ ಪ್ರಜ್ಞೆಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಸ್ವಾಮೀಜಿಯವರು ಇನ್ನೂ ಕೂಡ ಜೀವರಕ್ಷಕ ಸಾಧನಗಳ ವ್ಯವಸ್ಥೆಯಲ್ಲೇ ಇದ್ದಾರೆ ಮಾತ್ರವಲ್ಲದೆ ಅವರ ದೇಹಾರೋಗ್ಯಸ್ಥಿತಿ ನಿನ್ನೆಗಿಂತ ಇಳಿಮುಖವಾಗಿದೆ’ ಎಂದು ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next