ಮಂಗಳೂರು: ಕೆಟ್ಟ ಭಾವನೆಗಳನ್ನು ಬಿಟ್ಟು ಯಾರಿಗೂ ಕೆಡುಕು ಬಯಸದ ಧನಾತ್ಮಕ ಚಿಂತನೆಗಳೊಂದಿಗೆ ಸರ್ವರ ಹಿತದ ಸಂಕಲ್ಪವನ್ನು ನಮ್ಮ ಹೃದಯದಲ್ಲಿ ತುಂಬಿಸಿಕೊಂಡಾಗ ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಸಾಧ್ಯವಾಗುತ್ತದೆ ಎಂದು ಉಡುಪಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಹೇಳಿದರು.
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಅಷ್ಟೋತ್ತರ ಸಹಸ್ರ ಬ್ರಹ್ಮಕಲಾಭಿಷೇಕ ಮತ್ತು ಮಹಾದಂಡರುದ್ರಾಭಿಷೇಕದ ಅಂಗವಾಗಿ ಸೋಮವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಅಶೀರ್ವಚನ ನೀಡಿದರು.
ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಅಶೀರ್ವಚನ ನೀಡಿದರು. ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್ ದೀಪ ಪ್ರಜ್ವಲನಗೈದರು. ನಿಟ್ಟೆ ವಿವಿ ಸಹಕುಲಾಧಿಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ಯು.ತಾರನಾಥ ಆಳ್ವ, ನಿತ್ಯಾನಂದ ಮುಂಡೋಡಿ, ಹರಿಕೃಷ್ಣ ಪುನರೂರು, ಪುಷ್ಪರಾಜ ಜೈನ್, ಡಾ| ಎ.ಜೆ. ಶೆಟ್ಟಿ ,ಚಂದ್ರಕಲಾ, ನಿಂಗಯ್ಯ ಉಪಸ್ಥಿತರಿದ್ದರು.