Advertisement

ಮಸೀದಿಗಳಾಗಿ ಮಾರ್ಪಾಡಾದ ದೇವಾಲಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ: ಪೇಜಾವರ ಶ್ರೀ

10:14 PM Jun 06, 2024 | Team Udayavani |

ಬೆಳಗಾವಿ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು. ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ ಎಂದು ಅವರು ಈ ಹಿಂದೆ ನಮಗೆ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ನ್ಯಾಯಯುತ ಹೋರಾಟದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದ ಅವರು ಅಯೋಧ್ಯೆಯ ರಾಮ ಮಂದಿರ ಪ್ರಕರಣದಲ್ಲಿ ಕಾನೂನಿನ ಮೂಲಕವೇ ನಮಗೆ ನ್ಯಾಯ ಸಿಕ್ಕಿದೆ ಎಂದರು.

ಹಿಂದೂ ದೇವಾಲಯಗಳ ಸಂಪನ್ಮೂಲವನ್ನು ಇತರೆ ಧರ್ಮಗಳ ಪ್ರಾರ್ಥನಾ ಸ್ಥಳಗಳಿಗೆ ಬಳಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ದೇವಾಲಯಗಳನ್ನು ಮಾತ್ರ ಶೋಷಣೆಗೆ ಗುರಿಪಡಿಸಲಾಗಿದೆ. ಅದು ಸ್ವೀಕಾರಾರ್ಹವಲ್ಲ ಎಂದು ಸ್ಪಷ್ಟಪಡಿಸಿದರು.

ಸರಕಾರಗಳು ಎಲ್ಲ ಧರ್ಮಗಳಿಗೂ ಒಂದೇ ರೀತಿಯ ನಿಲುವು ತಳೆಯಬೇಕು. ಇದರಲ್ಲಿ ತಾರತಮ್ಯ ಸರಿಯಲ್ಲ ಎಂದರು.

Advertisement

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿರುವ ಫೈಜಾಬಾದ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿರುವ ಕುರಿತು ಪ್ರತಿಕ್ರಿಯಿಸಿದ ಶ್ರೀ ಗಳು ಅಭ್ಯರ್ಥಿ ಆಯ್ಕೆ ತಪ್ಪಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ಸೋತಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: Online Fraud: ಹೆಚ್ಚಿನ ಲಾಭ ಪಡೆಯಲು ಹೋಗಿ 25 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Advertisement

Udayavani is now on Telegram. Click here to join our channel and stay updated with the latest news.

Next