Advertisement

Pejawar seer: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವರ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

09:34 AM Sep 04, 2023 | Team Udayavani |

ಮೈಸೂರು: ಸನಾತನ ಧರ್ಮ ಮಲೇರಿಯಾ, ಡೆಂಗ್ಯು ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು’ ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

Advertisement

ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಹೇಳಿಕೆಯನ್ನು ನೀಡಿದ್ದು, ಒಂದು ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊ ಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾ ತನ ಧರ್ಮ. ಆದ್ದರಿಂದ ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ, ಅದನ್ನು ಖಂಡಿಸುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ.

ಇದನ್ನೂ ಓದಿ: Isro Scientist: ಚಂದ್ರಯಾನ-3 ಉಡಾವಣೆ ಕೌಂಟ್‌ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ನಿಧನ

Advertisement

Udayavani is now on Telegram. Click here to join our channel and stay updated with the latest news.

Next