Advertisement

ಮಧ್ಯಾಹ್ನದವರೆಗೆ ಉಡುಪಿಯಲ್ಲಿ ದರ್ಶನ ; ಬಳಿಕ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ

09:59 AM Dec 30, 2019 | Hari Prasad |

ಉಡುಪಿ: ಇಂದು ಕೃಷ್ಣೈಕ್ಯರಾದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಶ್ರೀಪಾದರ ಅಂತಿಮ ಸಾರ್ವಜನಿಕ ದರ್ಶನಕ್ಕೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ.

Advertisement

ಮಧ್ಯಾಹ್ನದ ಬಳಿಕ ಶ್ರೀಗಳ ಪಾರ್ಥೀವ ಶರೀರವನ್ನು ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ ಶ್ರೀನಗರದ ಸಮೀಪ ಇರುವ ವಿದ್ಯಾಪೀಠದಲ್ಲಿ ಶ್ರೀಗಳನ್ನು ಬೃಂದಾವರಸ್ಥರನ್ನಾಗಿಸಲಾಗುವುದು ಎಂಬ ಮಾಹಿತಿಯನ್ನು ಪೇಜಾವರ ಮಠದ ಮೂಲಗಳು ನೀಡಿವೆ.

– ವಿಶ್ವೇಶತೀರ್ಥರ ನಿರ್ಗಮನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಮಾಜೀ ಸಚಿವ ವಿನಯಕುಮಾರ್ ಸೊರಕೆ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಚಿವ ಸುರೇಶ್ ಕುಮಾರ್, ಸಚಿವ ಈಶ್ವರಪ್ಪ ಸೇರಿದಂತೆ ವಿವಿಧ ಗಣ್ಯರಿಂದ ಸಂತಾಪ.

– ಉಡುಪಿಯ ರಥಬೀದಿಯಲ್ಲಿರುವ ಪೇಜಾವರ ಮಠದಲ್ಲಿ ಹಿರಿಯ ಶ್ರೀಗಳಿಗೆ ಕಿರಿಯ ಶ್ರೀಗಳಿಂದ ಆರತಿ

Advertisement

Udayavani is now on Telegram. Click here to join our channel and stay updated with the latest news.

Next