ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಸಬೂಬುಗಳನ್ನು ಹೇಳಿ ಈ ಕಾಯ್ದೆ ಜಾರಿಗೆ ಬಾರದಂತೆ ತಡೆ ಒಡ್ಡಲಾಗಿದೆ. ಭರತ ಭೂಮಿಯಲ್ಲಿ ಗೋವುಗಳು ಪರಮ ಪೂಜನೀಯ ಆಗಿವೆ. ನಮ್ಮ ಬದುಕಿಗೆ ಗೋವುಗಳು ಅತ್ಯಂತ ಹತ್ತಿರವಾದವು. ಗೋವಂಶ ಉಳಿಸಲು ರಾಜ್ಯ ಸರ್ಕಾರ ಕೂಡಲೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯದಲ್ಲಿ ಮತಾಂತರ ಕಾಯಿದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪುರುಷರಿಗಿಂತ ಮಹಿಳೆಯರು ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ದೈಹಿಕ, ಆರ್ಥಿಕವಾಗಿ ಮಹಿಳೆಯರು ಹೆಚ್ಚು ಶೋಷಣೆಗೆ ಒಳಗಾಗುತ್ತಿದ್ದಾರೆ. ಕೂಡಲೇ ಸರ್ಕಾರ ಮಹಿಳೆಯರ ರಕ್ಷಣೆಗೆ ಕಾನೂನು ತರಬೇಕು ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ಸಿಎಂ ಆಗಲು ನಮ್ಮ ಸಮುದಾಯದವರು ಕುರಿ ಮಾರಿದ್ದಾರೆ: ಎಚ್.ವಿಶ್ವನಾಥ್
ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಕಾರ್ಯಾಲಯವು ವಿಶ್ವಹಿಂದೂ ಪರಿಷತ್ ನ ಮಂಗಳೂರು ಕಾರ್ಯಾಲಯದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಅಯೋಧ್ಯೆಯ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಾರ್ಯಾಲಯ ಉದ್ಘಾಟಿಸಿದರು. ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ವಾಮನ ಶೆಣೈ, ಪ್ರೊ.ಎಂ.ಬಿ ಪುರಾಣಿಕ್ ಮುಂತಾದವರು ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಹಾಜರಿದ್ದರು.