Advertisement

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ- ಚಿಕಿತ್ಸೆಗೆ ಸ್ಪಂದನೆ

10:02 AM Dec 23, 2019 | keerthan |

ಮಣಿಪಾಲ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುಬ ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥರ ಆರೋಗ್ಯ ಸ್ಥಿತಿ ಇಂದು ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

ಡಾ. ಸುಧಾ ವಿದ್ಯಾಸಾಗರ್ ನೇತೃತ್ವದ ವೈದ್ಯರ ತಂಡ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣುತ್ತಿದೆ. ಎದೆಯಲ್ಲಿ ಕಟ್ಟಿದ್ದ ಕಫ ನಿಧಾನವಾಗಿ ಕರಗುತ್ತಿದೆ. ಶ್ರೀಗಳೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೂ ಇಳಿ ವಯಸ್ಸುನ ಕಾರಣ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ  ಎಂದು ತಿಳಿಸಿದ್ದಾರೆ.

ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ಹೇಳಿಕೆ ನೀಡಿದ್ದಾರೆ, ಭಕ್ತರು ಆತಂಕ ಪಡಬೇಕಿಲ್ಲ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next