ಬೆಂಗಳೂರು:ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇದನ್ನೂ ಓದಿ:Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ
ಜೈಲಿನಿಂದ ಬಿಡುಗಡೆಯಾದ ರೇವಣ್ಣ ಅವರು ಪದ್ಮನಾಭನಗರದಲ್ಲಿರುವ ತಂದೆ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಆರತಿ ಬೆಳಗಿ ಸ್ವಾಗತಿಸಿದ್ದರು.
ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೂರು ದಿನಕ್ಕೂ ಹೆಚ್ಚು ಕಾಲ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಸೋಮವಾರ ಸಂಜೆ ಷರತ್ತು ಬದ್ಧ ಜಾಮೀನು ನೀಡಿತ್ತು. ಸಂಜೆ ಜಾಮೀನು ಮಂಜೂರು ಆಗಿರುವುದರಿಂದ ಪ್ರಕ್ರಿಯೆಗಳನ್ನು ಮುಗಿಸಬೇಕಿರುವ ಕಾರಣ ಮಂಗಳವಾರ ರೇವಣ್ಣ ಜೈಲಿನಿಂದ ಬಂಧಮುಕ್ತಗೊಂಡಿರುವುದಾಗಿ ವರದಿ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 4ರಂದು ರೇವಣ್ಣ ಅವರನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ನಾಲ್ಕು ದಿನಗಳ ಕಾಲ ಎಸ್ ಐಟಿ ವಶಕ್ಕೆ ನೀಡಿತ್ತು. ಬಳಿಕ 8ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಬಂಧನದ 12 ದಿನಗಳ ನಂತರ ಬಿಡುಗಡೆಯಾದಂತಾಗಿದೆ.