ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (ಪೆನ್‌ಡ್ರೈವ್ ಪ್ರಕರಣ)ದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
4ನೇ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿ ಗಳು 4 ದಿನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಸ್ಟಡಿ ಅವಧಿ ಶನಿವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 42ನೇ ಎಸಿಎಂಎಂಎ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈ ನಡುವೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಮುಂದೆ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ರನ್ನು ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.