Advertisement
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಯಲ್ಲಿ ದಾಖಲಾಗಿರುವ 3ನೇ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕಾದ ಹಿನ್ನೆಲೆಯಲ್ಲಿ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ರನ್ನು 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿಯಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದೀಗ 8 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ನನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ. ಇದಾದ ನಂತರ 4ನೇ ಪ್ರಕರಣದಲ್ಲಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಪ್ರಜ್ವಲ್ ವಿರುದ್ಧದ 2ನೇ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಮಂಗಳವಾರಷ್ಟೆ (ಜೂ. 18) ಕೋರ್ಟ್‌ಗೆ ಹಾಜರುಪಡಿಸಿತ್ತು. ಕೋರ್ಟ್ ಪ್ರಜ್ವಲ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
Related Articles
Advertisement