Advertisement

ಮಾಸ್ಕ್ ಧರಿಸದ ಸವಾರರಿಗೆ ದಂಡ

10:35 AM Jul 21, 2020 | Suhan S |

ಹರಪನಹಳ್ಳಿ: ಕೋವಿಡ್ ಸೋಂಕು ದಿನದಿಂದ ದಿನಕ್ಕೆ ತನ್ನ ಕೆನ್ನಾಲಿಗೆ ಚಾಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪುರಸಭೆ ವತಿಯಿಂದ ಪಟ್ಟಣದಲ್ಲಿ ಮಾಸ್ಕ್ ಧರಿಸಿದ ಸಂಚರಿಸುವ ವಾಹನ ಸವಾರರಿಗೆ ದಂಡ ವಿಧಿಸಿದರು.

Advertisement

ಪಟ್ಟಣದಲ್ಲಿ ಸಂಚರಿಸುತ್ತಿದ್ದ ಬೈಕ್‌ ಸವಾರರನ್ನು ತಡೆದು ಅವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ದಂಡ ಕೂಡ ವಸೂಲಿ ಮಾಡಲಾಯಿತು. ಇದಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿವಿಧ ಅಂಗಡಿಗಳ ಮಾಲೀಕರಿಗೂ ಸಹ 100ರೂ ದಂಡ ವಿ ಸಲಾಯಿತು. ಪುರಸಭೆಯಿಂದ ಕೋವಿಡ್ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿದ್ದೇವೆ. ಪಟ್ಟಣದಲ್ಲಿ ಆಟೋದ ಧ್ವನಿವರ್ಧಕ ಮೂಲಕ ಮತ್ತು ಫ್ಲೆಕ್ಸ್‌ಗಳ ಮೂಲಕ ಜಾಗೃತಿ ಕಾರ್ಯ ಮಾಡಿದ್ದೇವೆ. ಪ್ರತಿಯೊಬ್ಬರೂ ಸ್ವತ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದರೂ ಸಹ ವಾಹನ ಸವಾರರು ಮಾಸ್ಕ್ ಇಲ್ಲದೇ ಬೀದಿಗೆ ಬರುತ್ತಿದ್ದಾರೆ. ಅಂತವರಿಗೆ ದಂಡ ವಿಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಆರ್‌.ನಾಗರಾಜನಾಯ್ಕ ತಿಳಿಸಿದರು.

ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಪಿ. ಮಂಜುನಾಥ, ಸಮುದಾಯ ಸಂಘಟನಾಧಿಕಾರಿ ಸಿ. ಲೋಕ್ಯನಾಯ್ಕ, ಕಚೇರಿ ವ್ಯವಸ್ಥಾಪಕ ಅಶೋಕ್‌, ಗೌಡಪ್ಪ ಹಾಗೂ ಪೌರ ಕಾರ್ಮಿಕ ಸಿಬ್ಬಂದಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next