Advertisement

ಮಾಸ್ಕ್ ಧರಿಸದವರಿಗೆ ದಂಡ

01:24 PM Jan 14, 2022 | Team Udayavani |

ಗುರುಮಠಕಲ್‌: ಕೋವಿಡ್‌ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ನಿಷೇಧಿತ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸುವ ಕುರಿತು ಪುರಸಭೆ ಜಾಗೃತಿ ಕೈಗೊಂಡಿದ್ದು, ಗುರುವಾರ ಪುರಸಭೆ ಅಧಿಕಾರಿಗಳ ತಂಡ ಪಟ್ಟಣದ ವಿವಿಧೆಡೆ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಯಿತು.

Advertisement

ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಖಾದ್ಯದ ಅಂಗಡಿಗಳು ಸೇರಿದಂತೆ ಮಾರುಕಟ್ಟೆಯಲ್ಲಿ ತಪಾಸಣೆ ನಡೆಸಿದ ತಂಡ, ಪ್ಲಾಸ್ಟಿಕ್‌ ಚೀಲ ವಶಕ್ಕೆ ಪಡೆಯಿತು. ಸ್ವಚ್ಛತೆಗೆ ಆದ್ಯತೆ ನೀಡಿ ಕಸದ ವಾಹನ ಬಂದಾಗ ಕಸವನ್ನು ಅಲ್ಲಿ ಹಾಕಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದು ಕಂಡು ಬಂದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸ್ವಚ್ಛವಾದ ವಾತಾವರಣದಿಂದ ನಮ್ಮ ಆರೋಗ್ಯ ಚನ್ನಾಗಿರಲಿದ್ದು, ಸಾರ್ವಜನಿಕರು ಸಹಕರಿಸಿ ಎಂದು ಜಾಗೃತಿ ಮೂಡಿಸಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ವ್ಯಾಪಕವಾಗುತ್ತಿರುವ ಕಾರಣ ಸರ್ಕಾರದ ಮಾರ್ಗಸೂಚಿಗಳಂತೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪ್ಲಾಸ್ಟಿಕ್‌ ನಿಷೇಧದ ಕುರಿತು ಪುರಸಭೆ ನಿರಂತರವಾಗಿ ಜಾಗೃತಿ ಕಾರ್ಯ ಮಾಡಿದೆ. ಈಗ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದು ಪುರಸಭೆ ಸಿಬ್ಬಂದಿ ಮಾಹಿತಿ ನೀಡಿದರು.

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ, ಆರೋಗ್ಯ ನಿರೀಕ್ಷಕರಾದ ರಾಮುಲು ಗೌಡ, ಬಸವರಾಜ, ಪರಿಸರ ನೈರ್ಮಲ್ಯ ಅಧಿಕಾರಿ ಪ್ರಶಾಂತ, ಪರಶುರಾಮ, ರಾಘವೇಂದ್ರ, ರಿಯಾಜ್‌ ಸೇರಿದಂತೆ ಪುರಸಭೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next