Advertisement

ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯದಂತವರಿಗೆ ಒಟ್ಟು 43 ಸಾವಿರ ರೂ. ದಂಡ

03:36 PM May 06, 2020 | Suhan S |

ಬೆಳಗಾವಿ: ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಒಟ್ಟು 43,400 ರೂ. ದಂಡ ವಿಧಿಸಲಾಗಿದೆ.

Advertisement

ಲಾಕ್‌ ಡೌನ್‌-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ಹಾಕಲು ಅವಕಾಶ ಕಲ್ಪಿಸಿದ್ದಾರೆ.

ಈ ಆದೇಶವನ್ನು ಬೆಳಗಾವಿ ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್‌ ಕೆ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್  ವೈರಸ್‌ ನಿರ್ಮೂಲನೆ ಮಾಡುವುದು ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕುಎಂದು ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next