Advertisement

ನಿಯಮ ಉಲ್ಲಂಘಿದರೆ ದಂಡ

05:14 PM May 06, 2020 | Suhan S |

ಗದಗ: ಸಾರ್ವಜನಿಕ ಸ್ಥಳದಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಇಲ್ಲವೇ 250 ರೂ. ದಂಡ ವಿಧಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ತಿಳಿಸಿದ್ದಾರೆ.

Advertisement

ನಗರದ ಮಾರುಕಟ್ಟೆ ಪ್ರದೇಶ, ಅಂಗಡಿ ಮಳಿಗೆ, ಮೆಡಿಕಲ್‌ ಶಾಪ್‌, ಮಟನ್‌ ಶಾಪ್‌ ಹಾಗೂ ಇನ್ನಿತರೆ ಯಾವುದೇ ಕೆಲಸ ಕಾರ್ಯ ಗಳಿಗಾಗಿ ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಜನರು ಮುಖಕ್ಕೆ ಮಾಸ್ಕ್ ಧರಿಸಬೇಕು. ಅಂಗಡಿ ಮಾಲೀಕರು ಹಾಗೂ ಕೆಲಸಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸಿ ಕಂಡಲ್ಲಿ ಉಗುಳುವುದು, ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರ ವಿರುದ್ಧ 250 ರೂ. ದಂಡ ವಿಧಿ ಸಲಾಗುವುದು ಎಂದು ಎಚ್ಚರಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next