ರಾಯಚೂರು: ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದಲ್ಲಿ ದಂಡ ವಿ ಧಿಸುವಂತೆ ಜಿಲ್ಲಾಧಿ ಕಾರಿ ಆರ್.ವೆಂಕಟೇಶ ಕುಮಾರ್ ನಿರ್ದೇಶನ ನೀಡಿದರು.
ನಗರದ ಡಿಸಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಕೊರೊನಾ ವ್ಯಾಕ್ಸಿನ್ ಗೆ ಸಂಬಂಧಿ ಸಿದಂತೆ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅ ಧಿಕಾರಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ 500 ರೂ., ಸಿಂಧನೂರು ನಗರಸಭೆ ವ್ಯಾಪ್ತಿಯಲ್ಲಿ 300 ರೂ., ಪುರಸಭೆಗಳ ವ್ಯಾಪ್ತಿಯಲ್ಲಿ 200 ರೂ., ಪಟ್ಟಣ ಪಂಚಾಯಿತಿಗಳಲ್ಲಿ 100 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 25 ರೂ. ದಂಡ ವಿಧಿ ಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾ ಧಿಕಾರಿಗಳಿಗೆ ಸೂಚಿಸಿದರು.
ಸಂತೆ, ಜಾತ್ರೆಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ನಿಗಾ ವಹಿಸಬೇಕು. 45ರಿಂದ 59 ವರ್ಷ ಹಾಗೂ 60 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ, ಜಿಲ್ಲಾ, ತಾಲೂಕು ಆರೋಗ್ಯ ಅಧಿ ಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ಕೋವಿಡ್ ಲಸಿಕೆ ಪಡೆಯುವವರು ತಮ್ಮ ಹೆಸರು ನೋಂದಾಯಿಸಲು ಅನುಕೂಲವಾಗುವಂತೆ ಸಿಂಧನೂರು-10, ರಾಯಚೂರು-6, ಮಾನ್ವಿ-2, ದೇವದುರ್ಗ-2 ಮತ್ತು ಸಿರವಾರ ತಾಲೂಕುಗಳಲ್ಲಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದರು. ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಮಕೃಷ್ಣ, ತಹಶೀಲ್ದಾರ್ ಡಾ| ಹಂಪಣ್ಣ, ಆರ್‌ಸಿಎಚ್‌ಒ ಡಾ| ಕೆ.ವಿಜಯಾ, ಡಾ| ಸುರೇಂದ್ರ ಬಾಬು, ಸಿಎಂಸಿ ಪೌರಾಯುಕ್ತ ವೆಂಕಟೇಶ, ಡಾ| ಕೆ. ನಾಗರಾಜ್ ಸೇರಿ ಇತರರಿದ್ದರು.