Advertisement
ಈ ಬಾರಿ ಜನವರಿ ತಿಂಗಳಲ್ಲಿ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿ ಹಣಕಾಸಿನ ನೆರವಿಗೆ ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಸರಕಾರದಿಂದ ಅನುದಾನ ಬಿಡುಗಡೆಯ ಬಗ್ಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ. ಪ್ರತಿ ವರ್ಷಾಂತ್ಯ, ಆರಂಭಿಕ ತಿಂಗಳನ್ನು ಜೋಡಿಸಿಕೊಂಡು ಸುಮಾರು ಒಂದು ತಿಂಗಳ ಕಾಲ ಕರಾವಳಿ ಉತ್ಸವ ನಡೆಸಲಾಗುತ್ತದೆ. ಎರಡು ವರ್ಷಗಳಲ್ಲಿ ಕೊರೊನಾ ಕಾರಣಕ್ಕೆ ಈ ಉತ್ಸವ ಸ್ಥಗಿತಗೊಂಡಿತ್ತು. ಹಾಗಾಗಿ ಈ ವರ್ಷ ಹೊಸ ಹುಮ್ಮಸ್ಸಿನೊಂದಿಗೆ ಕರಾವಳಿ ಉತ್ಸವ ಆಯೋಜನೆಗೆ ಜಿಲ್ಲಾಡಳಿತ ಮುಂದಾಗಿತ್ತು.
ಜತೆಗೆ ಹೊರ ರಾಜ್ಯ, ಜಿಲ್ಲೆಗಳ ಕಲಾ ಪ್ರದರ್ಶನಕ್ಕೂ ಕರಾವಳಿ ಉತ್ಸವದಲ್ಲಿ ಅವಕಾಶ ನೀಡಲಾಗುತ್ತದೆ. 2019ರಲ್ಲಿ ಜನವರಿ 10ರಿಂದ ಕರಾವಳಿ ಉತ್ಸವ ಆರಂಭವಾಗಿ, 9 ದಿನಗಳ ಕಾಲ ನಡೆದಿತ್ತು. ಉತ್ಸವದುದ್ದಕ್ಕೂ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳಿಂದ ವೈವಿದ್ಯಮಯ ಕಲಾಪ್ರದರ್ಶನ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿತ್ತು. ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಯುವ ಉತ್ಸವ ಕದ್ರಿ ಪಾರ್ಕ್‌ನಲ್ಲಿ, ಪಣಂಬೂರಿನಲ್ಲಿ ಗಾಳಿಪಟ ಉತ್ಸವ ನಡೆದಿತ್ತು.
Related Articles
Advertisement
ಅನುದಾನ ಬಂದರೆ ಉತ್ಸವಕರಾವಳಿ ಉತ್ಸವಕ್ಕೆ ಅನುದಾನ ಬಂದಿಲ್ಲ. ಸರಕಾರಕ್ಕೆ ಪತ್ರ ಹೋಗಿದೆ. ಜನವರಿಯಲ್ಲಿ ಉತ್ಸವ ನಡೆಸುವ ಚಿಂತನೆ ಇತ್ತು. ಅನುದಾನಕ್ಕಾಗಿ ಕಾಯಲಾಗುತ್ತಿದೆ. ಅನುದಾನ ಬಂದರೆ ಫೆಬ್ರವರಿ ತಿಂಗಳಲ್ಲಿ ನಡೆಸಲು ಯಾವುದೇ ಅಡ್ಡಿ ಇಲ್ಲ.
– ರವಿಕುಮಾರ್ ಎಂ.ಆರ್., ದ.ಕ. ಜಿಲ್ಲಾಧಿಕಾರಿ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ
ಕರಾವಳಿ ಉತ್ಸವಕ್ಕೆ ಸರಕಾರದಿಂದ ಅನುದಾನ ಬಿಡುಗಡೆ ಕುರಿತಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಅವರು ಈ ಬಗ್ಗೆ ವಿಚಾರಿಸುವುದಾಗಿ ಹೇಳಿದ್ದಾರೆ.
– ವೇದವ್ಯಾಸ ಕಾಮತ್,
ಶಾಸಕರು, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ