ಬೆಂಗಳೂರು : ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಂತೆ ಮಾಜಿ ಕುಸ್ತಿಪಟುಗಳ ಮಾಸಾಶನ ಒಂದು ಸಾವಿರ ರೂಪಾಯಿ ಹೆಚ್ಚಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
50 ವರ್ಷ ಮೇಲ್ಪಟ್ಟ ಮಾಜಿ ಕುಸ್ತಿ ಪೈಲ್ವಾನ್‌ಗಳ ಮಾಸಾಶನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23 ರ ಬಜೆಟ್‌ನಲ್ಲಿ ಘೋಷಿಸಿದದ್ದರು. ಅದರಂತೆ ಮಾಸಾಶನವನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
ರಾಜ್ಯಮಟ್ಟ 2500 ರೂ.ನಿಂದ 3500, ರಾಷ್ಟ್ರಮಟ್ಟ 3000 ರೂ.ನಿಂದ 4000, ಅಂತರರಾಷ್ಟ್ರೀಯ ಮಟ್ಟ 4000 ರೂ.ನಿಂದ 5000 ರೂ.ಗೆ ಹೆಚ್ಚಿಸಲಾಗಿದೆ.
ಏಪ್ರಿಲ್ ಒಂದರಿಂದಲೇ ಈ ಆದೇಶವೂ ಜಾರಿಯಾಗಲಿದೆ. ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಮಾಜಿ ಪೈಲ್ವಾನರಿಗೆ ಮಾಸಾಶನ ಹೆಚ್ಚಿಸುವುವಂತೆ ಹಲವು ಬಾರಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾಸಾಶನ ಹೆಚ್ಚಿಸುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಭರವಸೆ ನೀಡಿದ್ದರು. ಅದರಂತೆ, ಈ ವರ್ಷದ ಬಜೆಟ್‌ನಲ್ಲಿ ಮಾಜಿ ಪೈಲ್ವಾನರ ಮಾಶಾಸನ ಒಂದು ಸಾವಿರ ರೂಪಾಯಿ ಹೆಚ್ಚಿಸಿ ಘೋಷಿಸಿ, ಒಂದೇ ತಿಂಗಳಲ್ಲಿ ಜಾರಿಗೆ ತರಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇದನ್ನೂ ಓದಿ : ಮಲ್ಪೆ ಬೀಚ್‌ನಲ್ಲಿ ನೀರಿನಲ್ಲಿ ಮುಳುಗಿ ಪ್ರವಾಸಿಗ ಸಾವು