ಧಾರವಾಡ: ಪಿಂಚಣಿ ಸೌಲಭ್ಯ ಪಡೆಯುವ ವಿಚಾರದಲ್ಲಿ ವಿಳಾಸದ ತೊಂದರೆ,ಹೆಸರಿನಲ್ಲಿನ ವ್ಯತ್ಯಾಸ ಸೇರಿದಂತೆ ಅನೇಕ ನ್ಯೂನತೆಗಳು ಸಾಮಾನ್ಯ. ಇಂತಹನ್ಯೂನತೆಗಳನ್ನು ಪತ್ತೆಹಚ್ಚಿ ಪಿಂಚಣಿದಾರರಸಮಗ್ರ ಮಾಹಿತಿ ಪಡೆದುಕೊಳ್ಳಲು ಅಂಚೆ ಪತ್ರಗಳ ಮೂಲಕ ಪ್ರಯತ್ನವೊಂದು ನಡೆದಿದೆ.
ನಗರದ ಸಪ್ತಾಪುರ ಹಾಗೂ ಅತ್ತಿಕೊಳ್ಳ ಪ್ರದೇಶದ ಗ್ರಾಮಲೆಕ್ಕಾಧಿಕಾರಿ ವೆಂಕಟೇಶ ಹಟ್ಟಿಯವರ ಕಾರ್ಯವ್ಯಾಪ್ತಿಯ ಪ್ರದೇಶಗಳಲ್ಲಿ ವಿವಿಧ ಪಿಂಚಣಿ ಪಡೆಯುತ್ತಿರುವ ಸುಮಾರು 3,000 ಫಲಾನುಭವಿ ಗಳಿದ್ದಾರೆ. ಬಹುವ್ಯಾಪ್ತಿ ಹೊಂದಿರುವ ಈ ಪ್ರದೇಶಗಳಲ್ಲಿನ ಫಲಾನುಭವಿಗಳ ಆಧಾರ್ ಸೀಡಿಂಗ್ ಕಾರ್ಯವನ್ನು ಕಾಲಮಿತಿಯಲ್ಲಿ ಮಾಡಲು ಅಗತ್ಯ ದಾಖಲೆ, ಮಾಹಿತಿನೀಡುವಂತೆ ತಿಳಿಸಿ ಫಲಾನುಭವಿಗಳಿಗೆ ಪತ್ರ ಬರೆದಿದ್ದಾರೆ. ಪಿಂಚಣಿ ಸೌಲಭ್ಯವನ್ನು ಈ ಹಿಂದೆ ಫಲಾನುಭವಿಗಳು ಅಂಚೆಯ ಮೂಲಕ ಪಡೆಯುತ್ತಿದ್ದರು.
ಅಂಚೆಯಣ್ಣನೇ ಫಲಾನುಭವಿಗಳ ಮನೆಗೆತೆರಳಿ ಪಿಂಚಣಿ ಹಣ ನೀಡುತ್ತಿದ್ದನು.ಇದನ್ನು ಗಮನಿಸಿರುವ ಈ ಗ್ರಾಮ ಲೆಕ್ಕಾಧಿಕಾರಿ ತನ್ನ ಪ್ರದೇಶ ವ್ಯಾಪ್ತಿಯಪ್ರತಿಯೊಬ್ಬ ಪಿಂಚಣಿ ಫಲಾನುಭವಿಯನಿಖರ ವಿಳಾಸ, ಪತ್ತೆ ಹಾಗೂ ದಾಖಲೆಪಡೆಯಲು ಆರಂಭಿಕವಾಗಿ ಗುರುವಾರಸುಮಾರು 180 ಜನರಿಗೆ ಪತ್ರ ಬರೆದು ಅಂಚೆಯ ಮೂಲಕ ಕಳುಹಿಸಿದ್ದಾರೆ.
ಇದರಿಂದಾಗಿ ಫಲಾನುಭವಿ ವಲಸೆ ಹೋಗಿದ್ದರೆ, ನಿಧನವಾಗಿದ್ದರೆ ಮತ್ತುವಿಳಾಸ ಬದಲಾಗಿದ್ದರೆ ಸರಳವಾಗಿ ಮತ್ತು ಖಚಿತವಾಗಿ ತಿಳಿದು ಬರುತ್ತದೆ. ರಾಜ್ಯಸರಕಾರದ ಪ್ರಮುಖ ಯೋಜನೆಗಳ ರಾಯಭಾರಿಗಳಾಗಿ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರಾಮಲೆಕ್ಕಾ ಧಿಕಾರಿಗಳಿಗೆ ವಿವಿಧ ಯೋಜನೆ, ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಕಾರ್ಯಗಳನ್ನು ವಹಿಸಲಾಗುತ್ತಿದೆ. ನಿಗದಿತ ಗುರಿ ಸಾಧಿಸುವ ಉದ್ದೇಶದಿಂದಪತ್ರ ಮೂಲಕ ಫಲಾನುಭವಿಗಳ ಸಂಪರ್ಕ ಸಾಧಿಸಲು ಈ ಗ್ರಾಮಲೆಕ್ಕಾಧಿಕಾರಿ ಹೊಸ ಮಾರ್ಗ ಹುಡುಕಿದ್ದು ಇತರರಿಗೆ ಮಾದರಿಯಾಗಿದೆ.