Advertisement

ಪೆಂಟಗನ್‌ನಲ್ಲಿ ಗ್ಲಾಮರಸ್‌ ಸಾಂಗ್‌

02:36 PM Mar 15, 2023 | Team Udayavani |

“ಜಿ ಸಿನಿಮಾಸ್‌’ ಬ್ಯಾನರಿನಲ್ಲಿ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ನಿರ್ಮಾಣದಲ್ಲಿ ಐದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ “ಪೆಂಟಗನ್‌’ ಸಿನಿಮಾ ತಯಾರಾ ಗುತ್ತಿರುವುದು ನಿಮಗೆ ಗೊತ್ತಿರಬಹುದು. ಈಗಾಗಲೇ “ಪೆಂಟಗನ್‌’ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

Advertisement

ಇತ್ತೀಚೆಗಷ್ಟೇ “ಪೆಂಟಗನ್‌’ ಸಿನಿಮಾದ ಟೀಸರ್‌ ಬಿಡುಗಡೆ ಮಾಡಿದ್ದ ಚಿತ್ರತಂಡ, ಈಗ “ಪೆಂಟಗನ್‌’ ಸಿನಿಮಾದ ಮೂರನೇ ಕಥೆಯಲ್ಲಿ ಬರುವ “ಕಾಮನಬಿಲ್ಲು ಮೂಡುತಿದೆ…’ ಎಂಬ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ. ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ನಾಗಾರ್ಜುನ ಶರ್ಮಾ ಸಾಹಿತ್ಯವಿದೆ. ಸಂತೋಷ ವೆಂಕಿ ಮತ್ತು ಇಂಚರ ರಾವ್‌ ಗೀತೆಗೆ ಧ್ವನಿಯಾಗಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿಬಂದಿರುವ “ಪೆಂಟಗನ್‌’ ಮೂರನೇ ಅಧ್ಯಾಯದಲ್ಲಿ ಪ್ರಕಾಶ್‌ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ, ಸಾಗರ್‌, ರಾಕೇಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟ್ರೇಲರ್‌ನಲ್ಲಿ ಪ್ರಭುತ್ವ ಸದ್ದು

ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯುವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡ ಮಾಹಿತಿ. ಈ ಅಧ್ಯಾಯಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ವೆಂಕಟೇಶ ಯುಡಿವಿ ಸಂಕಲನವಿದೆ. ಸದ್ಯ “ಝೇಂಕಾರ್‌ ಮ್ಯೂಸಿಕ್‌’ ಯು-ಟ್ಯೂಬ್‌ ಚಾನೆಲ್‌ನಲ್ಲಿ ಈ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದ್ದು, ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಇನ್ನು “ಪೆಂಟಗನ್‌’ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್‌ ಶ್ರೀವತ್ಸ, ಚಂದ್ರಮೋಹನ್‌, ರಾಘು ಶಿವಮೊಗ್ಗ, ಕಿರಣ್‌ ಕುಮಾರ್‌ ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, ಸದ್ಯ ಪ್ರಚಾರ ಕಾರ್ಯ ಶುರು ಮಾಡಿರುವ ಚಿತ್ರತಂಡ, ಇದೇ ಏಪ್ರಿಲ್‌ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next