Advertisement

ಜನರು ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ: ಸಿದ್ದರಾಮಯ್ಯ

10:40 AM Dec 04, 2021 | Team Udayavani |

ಶಿವಮೊಗ್ಗ: ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರು ಶಾಪ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಈಶ್ವರಪ್ಪರ ಸಿಎಂ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಈಶ್ವರಪ್ಪ ಬಾಯಿ ತಪ್ಪಿ ಸತ್ಯ ಹೇಳುತ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಪೊಲೀಸ್ ಅಧಿಕಾರಿಗಳಿಗೆ ಟೀಕೆ ವಿಚಾರದ ಮಗ್ಗೆ ಮಾತನಾಡಿದ ಅವರು, ಅವರಿಗೆ ನಿರ್ವಹಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಅತಿವೃಷ್ಠಿ ಸಮಸ್ಯೆಯಿದೆ. ಮೂರು ನಾಲ್ಕು ಪಟ್ಟು ಮಳೆ ಹೆಚ್ಚಾಗಿದೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಒಂದು ತಿಂಗಳಾಯ್ತು ಆದರೆ ಇನ್ನೂ ಸರ್ವೇಯಾಗಿಲ್ಲ. ಇದು ರೈತರ ವಿರೋಧಿ ಸರ್ಕಾರ ಎಂದು ಸಿದ್ದರಾಮಯ್ಯ ಟೀಕಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next