Advertisement

ಕಾಂಗ್ರೆಸ್‌ ಕಿತ್ತೆಸೆಯಲು ಜನ ಕಾತರ

11:56 AM May 11, 2018 | |

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ  ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಅವರು ಗುರುವಾರ ಕ್ಷೇತ್ರದಲ್ಲಿ ರೋಡ್‌ ಶೋ ಹಾಗೂ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.

Advertisement

ನಟ ಯಶ್‌ ಮನೆಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡಿದ ಅವರು ನಂತರ ನಟ ಗಣೇಶ್‌ ಅವರೊಂದಿಗೆ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನತೆ ಮತದಾನದ ದಿನಕ್ಕಾಗಿ ಕಾಯುತ್ತಿದ್ದು ರಾಜ್ಯ ಸರ್ಕಾರವನ್ನು ಕಿತ್ತೂಗೆಯಲು ಕಾತುರರಾಗಿದ್ದಾರೆ. ಪದ್ಮನಾಭನಗರದಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿತ್ತು. ಕಸ ನಿರ್ವಹಣೆ, ರಸ್ತೆ ಅಭಿವೃದ್ಧಿ, ಸಂಚಾರ ದಟ್ಟಣೆ, ಸಿಗ್ನಲ್‌ ಫ್ರೀ ಕಾರಿಡಾರ್‌, ಮೇಲ್ಸೇತುವೆ ಹಾಗೂ ಕೆಳ ಸೇತುವೆಗಳ ನಿರ್ಮಾಣ ಮಾಡಲಾಗಿದೆ. ಪದ್ಮನಾಭನಗರ ಕ್ಷೇತ್ರದಲ್ಲೂ ಅಭಿವೃದ್ಧಿಯ ಹೊಸ ಶೆಕೆ ಆರಂಭವಾಗಿತ್ತು ಎಂದು ಹೇಳಿದರು.

ಐದು ವರ್ಷಗಳಲ್ಲಿ ರಾಜ್ಯಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫ‌ಲವಾಗಿದೆ. ಜತೆಗೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ ಎಂದು ದೂರಿದರು. ಈ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿ, ಸಾರಿಗೆ, ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಶಾಸಕನಾಗಿ ಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ಕಾಮಗಾರಿ, ಉದ್ಯಾನವನಗಳ ನಿರ್ಮಾಣ ಸೇರಿ ಸರ್ಕಾರಿ ಯೋಜನೆಗಳು ಬಡವರಿಗೆ, ಅರ್ಹರಿಗೆ ತಲುಪುವಂತೆ ಮಾಡಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next