Advertisement

ಕಾಂಗ್ರೆಸ್ ನಾಯಕರ ವಿರುದ್ಧ ಜಮೀರ್ ಮುನಿಸು: ರಾಜಕೀಯ ವಲಯದಲ್ಲಿ ಕುತೂಹಲ

04:32 PM Apr 02, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ ಸಿ.ಎಂ.ಇಬ್ರಾಹಿಂ ಈಗ ಅಲ್ಪಸಂಖ್ಯಾತ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದಾರೆಂಬ ಸುದ್ದಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Advertisement

ರಾಹುಲ್ ಗಾಂಧಿ ಕೆಪಿಸಿಸಿ ಕಚೇರಿಯಲ್ಲಿ‌ ನಡೆಸಿದ ವಿಶೇಷ ಸಭೆಯ ಸಂದರ್ಭದಲ್ಲಿ ಜಮೀರ್ ಗೈರು ಹಾಜರಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ಅವರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಮಾಜಿ ಸಚಿವ ರೋಶನ್ ಬೇಗ್ ಅವರನ್ನು ಇಬ್ರಾಹಿಂ ಶನಿವಾರ ಭೇಟಿ ಮಾಡಿ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರನ್ನೂ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿಜಾಬ್ ಸೇರಿದಂತೆ ಪ್ರಮುಖ ವಿವಾದದ ಸಂದರ್ಭದಲ್ಲಿ‌ ಕಾಂಗ್ರೆಸ್ ಪೂರ್ಣ ಪ್ರಮಾಣದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪರ ನಿಂತಿಲ್ಲ ಎಂಬುದು ಮುಸ್ಲಿಂ ನಾಯಕರ ವಾದ. ಈ ಹಿನ್ನೆಲೆಯಲ್ಲಿ ಮುಸ್ಲಿಂ ನಾಯಕರನ್ನು ಜೆಡಿಎಸ್ ಗೆ ಸೆಳೆಯುವ ಪ್ರಯತ್ನ ಆರಂಭವಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next