Advertisement
ಶುಕ್ರವಾರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಅಂಗವಾಗಿ ಅನುಮತಿ ಪಡೆಯದೆ ಖಾಸಗಿ ಬಸ್‌ಗಳಲ್ಲಿ ಜನರನ್ನು ಕರೆತಲಾಗಿದೆ ಎಂದು ಚುನಾವಣಾಧಿ ಕಾರಿಗಳು ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ 96 ಖಾಸಗಿ ಬಸ್‌ಗಳ ಮಾಲೀಕರು ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ.
ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಕಾರನ್ನು ಚುನಾವಣಾಧಿಕಾರಿಗಳು ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ತಪಾಸಣೆ ಮಾಡಿದರು. ತಿಟ್ಟಮಾರನಹಳ್ಳಿಯ ಚೇತನಾ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಪಾಲ್ಗೊಳ್ಳಲು ಯೋಗೇಶ್ವರ್ ತಮ್ಮ ಕಾರಿನಲ್ಲಿ ಆಗಮಿಸಿದ್ದರು. ಈ ಸಂದರ್ಭ ಚುನಾವಣಾಧಿಕಾರಿಗಳು ಕಾರಿನಲ್ಲಿದ್ದ ಬ್ಯಾಗ್ ಹಾಗೂ ಇತರ ವಸ್ತುಗಳನ್ನು ಪರಿಶೀಲಿಸಿದರು. ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ವಸ್ತುಗಳು ಸಿಗಲಿಲ್ಲ.
Related Articles
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಆದರೆ ನಾವು ಇದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖೀಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಆಗ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದು ದೂರಿದರು.
ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ಅನಂತರ ಒಂದು ನೋಟಿಸ್ ಕೊಟ್ಟಿದ್ದಾರೆ. ಇವರು ಬರುವವರ ಮೇಲೆಲ್ಲ ಕೇಸ್ ಹಾಕಿಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೋಟಿಸ್ ಕೊಟ್ಟಿದ್ದಾರೆ. ಸರಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೋಟಿಸ್ ನೀಡಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ಕಡೆಯಿಂದ ಎಲ್ಲರೂ ಚನ್ನಪಟ್ಟಣಕ್ಕೆ ಹೋಗಿದ್ದರಲ್ಲವೇ? ಹಾಗಿದ್ದರೆ ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡಿರಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವೀಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗುತ್ತಿದ್ದಾರೆ ಇವರು? ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು ಎಂದು ಅವರು ಹೇಳಿದರು.
ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆ¨ªಾಗಿದೆ ಎಂದು ಬೀಗುತ್ತಿ¨ªಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ. ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ನೀತಿ ಸಂಹಿತೆ ಗೊತ್ತಿಲ್ಲದಿದ್ದರೆ ಪ್ರಧಾನಿ ಬಳಿ ಕೇಳಲಿ: ಡಿಕೆಸುಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ಧಾಳಿ ನಡೆಸಿದರು. ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಅವರು ಅನೇಕ ಚುನಾವಣೆಗಳನ್ನು ಮಾಡಿದ್ದಾರೆ. ನೀತಿ ಸಂಹಿತೆ ಬಗ್ಗೆ ಅವರಿಗೂ ಜ್ಞಾನವಿದೆ. ನೀತಿ ಸಂಹಿತೆ ಸಮಯದಲ್ಲಿ ಯಾರು ಯಾವ ಪಾತ್ರ ವಹಿಸುತ್ತಾರೆ, ಪ್ರಕ್ರಿಯೆ ಹೇಗಿರುತ್ತದೆ ಎಂದು ಎಲ್ಲರಿಗೂ ಗೊತ್ತಿದೆ. ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಅದು ಚುನಾವಣಾಧಿಕಾರಿಗಳಿಗೆ ಸಂಬಂಧಪಟ್ಟ ವಿಚಾರ, ನಮಗೆ ಸಂಬಂಧಿಸುವುದಿಲ್ಲ ಎಂದರು. ಬಸ್‌ಗಳಲ್ಲಿ ಜನರನ್ನು ಕರೆ ತಂದಿದ್ದರೆ ಅದಕ್ಕೆ ಲೆಕ್ಕ ಕೊಡಬೇಕು, ಅನುಮತಿ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನ ಕೇಂದ್ರ ಸಚಿವರಿಗೆ ಇಲ್ಲವಾದರೆ ಹೇಗೆ? ಗೊತ್ತಿಲ್ಲವಾದರೆ ಹೋಗಿ ಪ್ರಧಾನಮಂತ್ರಿ ಬಳಿ ಕೇಳಲಿ ಎಂದು ಲೇವಡಿ ಮಾಡಿದರು.