Advertisement

ಕಾಂಗ್ರೆಸ್‌ನಿಂದ ಜನಪರ ಕಾರ್ಯ

04:34 PM May 11, 2018 | |

ಸಾಗರ: ಸಾಗರ ಕ್ಷೇತ್ರವನ್ನು ಮುಂದೆ ಬೇಳೂರು ಗೋಪಾಲಕೃಷ್ಣ ಹಾಗೂ ನಾನು ಸೇರಿ ಸಂಪೂರ್ಣ ಅಭಿವೃದ್ಧಿ
ಮಾಡುವುದರ ಜೊತೆಗೆ ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್‌
ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.

Advertisement

 ಗುರುವಾರ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೋಡ್‌ ಶೋ ಉದ್ದೇಶಿಸಿ ಅರಳಿಕಟ್ಟೆ ವೃತ್ತದಲ್ಲಿ
ಏರ್ಪಡಿಸಿದ್ದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 4.25 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಲಾಗುತ್ತಿದೆ. ಶೇ. 100ರಲ್ಲಿ 80ರಷ್ಟು ಜನರಿಗೆ ಬಿಪಿಎಲ್‌ ಕಾರ್ಡ್‌ ನೀಡಲಾಗಿದೆ. ಪಡಿತರ ಸೇರಿದಂತೆ ಬೇರೆಬೇರೆ ಯೋಜನೆ ಬಿಪಿಎಲ್‌ ಕಾರ್ಡದಾರರಿಗೆ ಹೆಚ್ಚಿನ ಅನುಕೂಲವಾಗಿದೆ. ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ಹಾಲು ನೀಡುವ ಮೂಲಕ ಮಕ್ಕಳ ಪೌಷ್ಟಿಕತೆಯನ್ನು ಹೆಚ್ಚಿಸುವ ಕೆಲಸ ಕಾಂಗ್ರೆಸ್‌ ಮಾಡಿದೆ ಎಂದರು. 

ಸಾಗರದಲ್ಲಿ ಶಾಹಿ ಗಾರ್ಮೆಂಟ್ಸ್‌ ಮೂಲಕ ಸುಮಾರು 4 ಸಾವಿರ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗಿದೆ. ರಾಮನಗರದಲ್ಲಿ ಕೈಗಾರಿಕಾ ವಸಾಹತು ನಿರ್ಮಿಸಲಾಗುತ್ತಿದ್ದು, ಇದರಿಂದ 10 ಸಾವಿರ ಯುವಕರಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ನಗರೋತ್ಥಾನದಲ್ಲಿ 21 ಕೋಟಿ ರೂ. ಹಣ ಬಂದಿದ್ದು, ನಗರದ ರಸ್ತೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದರು.

ಕ್ಷೇತ್ರದಲ್ಲಿ ನಾನು ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಟ್ಟಾಗಿ ಪ್ರವಾಸ ಮಾಡಿ ಮತಯಾಚನೆ
ಮಾಡುತ್ತಿರುವುದು ಮತದಾರರ ಮನ ಗೆಲ್ಲಲು ಕಾರಣವಾಗಿದೆ. ಜನರು ಪಕ್ಷದ ಅಭಿವೃದ್ಧಿ ಕೆಲಸಗಳಿಗೆ ಮನ
ಸೋತಿದ್ದಾರೆ. ಬೇಳೂರು ನನ್ನ ಜೊತೆ ಇರುವುದರಿಂದ ಪಕ್ಷದ ಬಲ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಸೇರಿ ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ನಂ. 1 ಸ್ಥಾನಕ್ಕೆ ಏರಿಸುವ ಸಂಕಲ್ಪ ಕೈಗೊಂಡಿದ್ದೇವೆ ಎಂದರು.

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸು
ಕುಸಿಯುತ್ತಿದೆ. ರಾಜ್ಯವ್ಯಾಪಿ ನಡೆದ ಎಲ್ಲ ಸರ್ವೇಗಳಲ್ಲೂ ಕಾಂಗ್ರೆಸ್‌ ಪಕ್ಷ ಅತಿದೊಡ್ಡ ಪಕ್ಷವಾಗಿ ಮೂಡಿಬರುತ್ತಿರುವುದರಿಂದ ಬಿಜೆಪಿ ಹತಾಶವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 130 ಸ್ಥಾನವನ್ನು ಪಡೆದು ಅ ಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.

Advertisement

ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಲು ಕೆಜೆಪಿಯಿಂದ ಬಂದವರಿಗೆ ಟಿಕೆಟ್‌ ನೀಡಿರುವುದು ಮತ್ತು ಭ್ರಷ್ಟಾಚಾರದ ಆರೋಪ ಹೊತ್ತು ಜೈಲಿಗೆ ಹೋಗಿ ಬಂದ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದೇ ಕಾರಣವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಳಂಕಿತ ಅಭ್ಯರ್ಥಿ ಹರತಾಳು
ಹಾಲಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಇದರಿಂದ ಮಹಿಳೆಯರು ಯಾರೂ ಬಿಜೆಪಿಗೆ ಮತ ನೀಡುವುದಿಲ್ಲ. ಕೇಂದ್ರ ಸಚಿವ ಅನಂತಕುಮಾರ್‌ ಮಾವ
ಅಳಿಯ ಸೇರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ನಾವು ಅಭಿವೃದ್ಧಿ ಮಾಡಿದ್ದೇವೆ. ನಿಮ್ಮ
ಕ್ಷೇತ್ರದಲ್ಲಿ ನೀವು ಗುಡಿಸಿ, ಗುಂಡಾಂತರ ಮಾಡಿದ್ದೀರಿ ಎಂದು ಟೀಕಿಸಿದರು. 

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಲ್‌.ಟಿ. ತಿಮ್ಮಪ್ಪ, ನಗರ ಘಟಕದ ಅಧ್ಯಕ್ಷ ಮಕೂºಲ್‌ ಅಹ್ಮದ್‌, ಕೆಪಿಸಿಸಿ ಕಾರ್ಯದರ್ಶಿ ಡಾ| ರಾಜನಂದಿನಿ ಇನ್ನಿತರರು ಇದ್ದರು.  

Advertisement

Udayavani is now on Telegram. Click here to join our channel and stay updated with the latest news.

Next