ಶಿವಮೊಗ್ಗ: ವೀರಶೈವ ಮತ್ತು ಲಿಂಗಾಯತ ಧರ್ಮ ಎರಡೂ ಒಂದೇ. ಇವು ಹಿಂದೂ ಧರ್ಮದ ಅಡಿಯಲ್ಲಿಯೇ ಬರುತ್ತವೆ. ಇಂತಹ ವಿಷಯದಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡಲು ಹೋಗಿ ಜನರ ಭಾವನೆಯೊಂದಿಗೆ ಆಟವಾಡಬಾರದೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎಂದು ಕೇಂದ್ರಕ್ಕೆ ಶಿಫಾರಸು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ, ಸರ್ಕಾರ ಧರ್ಮ ರಾಜಕಾರಣದಿಂದ ದೂರ ಇರಬೇಕು ಎಂದರು.
ಲಿಂಗಾಯತ ಹಾಗೂ ವೀರಶೈವ ಎರಡೂ ಧರ್ಮ ಒಂದೇ ಎಂದು ಅಖೀಲ ಭಾರತೀಯ ವೀರಶೈವ ಮಹಾಸಭಾ ಅಭಿಪ್ರಾಯ ತಿಳಿಸಿದೆ. ಇದನ್ನು ಸ್ವತಂತ್ರ ಧರ್ಮ ಎಂದು ಘೋಷಿಸಲು ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಇದನ್ನೇ ಮೂಲವಾಗಿಟ್ಟುಕೊಂಡು ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಂಎ ಹೇಳಿರುವುದು ಅವರ ಇಬ್ಬಗೆ ನೀತಿಯನ್ನು ತಿಳಿಸುತ್ತದೆ.ಮುಖ್ಯಮಂತ್ರಿಗಳು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆರೆಗಳ ಡಿನೋಟಿಫೈ ಖಂಡನೀಯ: ಕೆರೆಗಳನ್ನು ಡಿನೋಟಿಫೈ ಮಾಡಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬತ್ತಿರುವ ಕೆರೆಗಳನ್ನು ಡಿನೋಟಿಫೈ ಮಾಡುವ ಮೂಲಕ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲ ಮಾಡಿಕೊಟ್ಟಿದೆ. ಅಧಿಕಾರ ಹೋಗುವ ಮುನ್ನ ಸಾಧ್ಯವಾದಷ್ಟು ಬಾಚಿಕೊಳ್ಳುವುದು ಇದರ ಹಿಂದಿನ ಉದ್ದೇಶ ಎಂದು ಆರೋಪಿಸಿದರು. ಸರ್ಕಾರದ ಈ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲೂ ಬಿಜೆಪಿ ಸಿದಟಛಿವಿದೆ ಎಂದರು.