Advertisement

ಕಾಂಗ್ರೆಸ್ ಗೆ ಅಧಿಕಾರ ಕೊಡಲು ಜನರೇ ಸಂಕಲ್ಪ ಮಾಡಿದ್ದಾರೆ: ಸಿದ್ದರಾಮಯ್ಯ

12:01 PM Nov 08, 2022 | Team Udayavani |

ಹುಬ್ಬಳ್ಳಿ: ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ‌. ಜನರು ಆ ಪಕ್ಷ ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಬರುವ ಅಷ್ಟು ಇಷ್ಟು ಜನರನ್ನು ಹಿಡಿದಿಡಲು ಗೇಟ್ ಗೆ ಬೀಗ ಹಾಕುವ ಸ್ಥಿತಿ ಬಿಜೆಪಿಯದ್ದಾಗಿದೆ ಎಂದು ವ್ಯಂಗ್ಯ ವಾಡಿದರು.

ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲ್ಯುಎಸ್)ಗೆ ಶೇ. 10ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪುನ್ನು ನಾನು ಇನ್ನೂ ಗಮನಿಸಿಲ್ಲ. ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಗೊತ್ತಿರುವ ಪ್ರಕಾರ ಸಂವಿಧಾನದ ಅನುಚ್ಛೇದ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ, ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ. ಸತೀಶ ಜಾರಕಿಹೊಳಿ ನೀಡಿದ ಹಿಂದೂ ಪದ ಹೇಳಿಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ನೀಡಿರುವ ಪ್ರತಿಕ್ರಿಯೆಯೇ ನನ್ನ ನಿಲುವಾಗಿದೆ ಎಂದಷ್ಟೇ ತಿಳಿಸಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಟಿಪ್ಪು ಜಯಂತಿ ಮಾಡುವುದು ತಪ್ಪಲ್ಲ, ಆದರೆ ಸರಕಾರ ಜಯಂತಿ ಆಚರಣೆ ನಿಲ್ಲಿಸಿದ್ದಾರೆ. ಹೀಗಾಗಿ ಪಾಲಿಕೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ನೋಡೋಣ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next