ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬಿಬಿಎಂಪಿಗೆ ಈ ಆದೇಶ ನೀಡಿದೆ.
Advertisement
ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ನಗರದ ರಾಜಕಾಲುವೆ ನಿರ್ವಹಣೆಗೆ ಸಂಬಂಧ ಶಿಫಾರಸು ಮಾಡಿ 2021ರ ಸೆಪ್ಟೆಂಬರ್‌ನಲ್ಲೇ ಸಿಎಜಿ ವರದಿ ನೀಡಿದೆ. ಆ ವರದಿ ಆಧರಿಸಿ ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಬಳಿಕ ಸಿಎಜಿ ವರದಿ ಜಾರಿ ಮಾಡಬಲ್ಲ ಎಂದೆನಿಸುವ ಮೂವರು ಅಧಿಕಾರಿಗಳ ಸಮಿತಿಯನ್ನು ಮಂಗಳವಾರದೊಳಗೆ (ಸೆ.20) ರಚಿಸಬೇಕು. ಆ ಸಮಿತಿಯು ಸಿಎಜಿ ವರದಿಯ ಶಿಫಾರಸುಗಳ ಜಾರಿಗೊಳಿಸಲು ಕ್ರಮ ಕೈಗೊಂಡು 15 ದಿನಗಳಿಗೊಮ್ಮೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು.
Related Articles
ಮಳೆ ನೀರು ಪ್ರವಾಹದಿಂದ ನಗರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಕುಂದುಕೊರತೆ ಪರಿಹಾರ ಕೇಂದ್ರ ಆರಂಭಿಸಲು ಹೈಕೋರ್ಟ್ ನಿರ್ದೇಶಿಸಿತ್ತು. ಅದರಂತೆ ಕುಂದು ಕೊರತೆ ನಿವಾರಣೆಗೆ ವೆಬ್‌ಸೈಟ್ ಆರಂಭಿಸಿರುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. ಆದರೆ, ವೆಬ್ ಸೈಟ್‌ನಲ್ಲಿ ನೀಡಲಾಗಿರುವ ಕೆಲ ದೂರವಾಣಿ ಸಂಖ್ಯೆಯಲ್ಲಿ 9 ಸಂಖ್ಯೆ ಮಾತ್ರ ಇದೆ. ಮತ್ತಷ್ಟು ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಲೇ ಇಲ್ಲ. ಕುಂದು ಕೊರತೆ ಪರಿಹರಿಸುವ ರೀತಿ ಹೀಗೇನಾ? ಎಂದು ಬಿಬಿಎಂಪಿಯನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.
Advertisement
ಜನ ರಿಗೆ ಗುಂಡಿ ಮುಕ್ತ ರಸ್ತೆ ಹಕ್ಕು ಇದೆನಗರದ ಪ್ರಮುಖ ರಸ್ತೆಗಳ 427.12 ಕಿ.ಮೀ. ರಸ್ತೆ ರಿಪೇರಿ ಮತ್ತು ಡಾಂಬರೀಕರಣ ಕಾರ್ಯಕ್ಕೆ ಟೆಂಡರ್ ನೀಡಲಾಗಿದೆ. ಅದರಲ್ಲಿ ಕೆಲ ಕೆಲಸಗಳು 2023ರ ಜ.31ರೊಳಗೆ ಪೂರ್ಣಗೊಳ್ಳಲಿದೆ. ಇನ್ನೂ ಪಾಲಿಕೆಯ 8 ವಲಯಗಳ ವಾರ್ಡ್ ಮಟ್ಟದಲ್ಲಿ ಒಟ್ಟು 2,500 ಕಿ.ಮೀ. ರಸ್ತೆಗಳ ಗುಂಡಿ ಮುಚ್ಚುವ, ರಸ್ತೆ ರಿಪೇರಿ ಮತ್ತು ಡಾಂಬರೀಕರಣ ಕಾರ್ಯವನ್ನು 2023ರ ಮಾ.31ರ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಜತೆಗೆ ನಗರದಲ್ಲಿ ಸೆ.14ರವರೆಗೆ ಒಟ್ಟು ಪ್ರಮುಖ ರಸ್ತೆಗಳ 2,010 ರಸ್ತೆ ಗುಂಡಿ ಮುಚ್ಚಲಾಗಿದ್ದು, ಉಳಿದ 221 ಗುಂಡಿ ಭರ್ತಿ ಮಾಡಬೇಕಿದೆ. ಅವುಗಳನ್ನು ಮುಂದಿನ ಹತ್ತು ದಿನಗಳಲ್ಲಿ ಹಾಟ್ ಮಿಕ್ಸ್ ಬಳಸಿ ಮುಚ್ಚಲಾಗುವುದು ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರದಲ್ಲಿ ರಸ್ತೆಗಳನ್ನು ಉತ್ತಮ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಮತ್ತು ಅವುಗಳನ್ನು ನಿರ್ವಹಣೆ ಮಾಡುವುದು ಶಾಸನಬದ್ಧ ಸಂಸ್ಥೆಯಾದ ಬಿಬಿಎಂಪಿ ಜವಾಬ್ದಾರಿ. ಗುಂಡಿ ಮುಕ್ತ ರಸ್ತೆ ಹೊಂದುವ ಹಕ್ಕು ನಾಗರಿಕರಿಗೆ ಇದೆ. ಸಾಕಷ್ಟು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದೆ. ಅದರಿಂದ ದ್ವಿಚಕ್ರ ವಾಹನ ಸವಾರರಿಗೆ ಅಪಾಯವಿದೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿಗೆ ಸೂಚಿಸಿ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿತು.