Advertisement
ನಗರದ ಸುಭಾಷ್‌ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ರಾಜಕಾರಣದ ಹಿಡಿತ ಸಾಬೀತುಪಡಿಸಿದ್ದಾರೆ. ಇದು ಹಿಂದೆಯೂ ನಡೆದಿದೆ ಎಂದು ಹೇಳಿದರು.
Related Articles
Advertisement
ಕಾಶ್ಮೀರದಲ್ಲಿ 370ನೇ ವಿಧಿ ತೆಗೆದುಹಾಕಿರುವುದು. ತ್ರಿವಳಿ ತಲಾಖ್ ರದ್ದು ಮಾಡಿರುವುದು ಸೇರಿದಂತೆ ಪ್ರಧಾನಿ ದಿಟ್ಟ ಕ್ರಮಗಳನ್ನು ಅಲ್ಪ ಸಂಖ್ಯಾತರೂ ಕೂಡ ಒಪ್ಪಿದ್ದಾರೆ. ಆದರೆ 70 ವರ್ಷಗಳಲ್ಲಿ ಕಾಂಗ್ರೆಸ್ ಮಾಡಲಾಗದ ಕೆಲಸವನ್ನು ಪ್ರಧಾನಿ ಮೋದಿ 7 ವರ್ಷದಲ್ಲಿ ಮಾಡಿ ತೋರಿಸಿದ್ದಾರೆ. ಈಗ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಅಂಬೇಡ್ಕರ್ ನಿಧನರಾದಾಗ ಇದೇ ಕಾಂಗ್ರೆಸ್‌ನವರು ದೆಹಲಿಯಲ್ಲಿ ಅಂತ್ಯ ಸಂಸ್ಕಾರ ಮಾಡಲು ಒಂದು ಅಡಿ ಜಾಗ ಕೊಡಲಿಲ್ಲ. ಗಾಂಧೀಜಿ ಅವರ ಬಗ್ಗೆ ಕಾಂಗ್ರೆಸ್‌ಗೆ ಯಾವತ್ತೂ ಒಲವೇ ಇರಲಿಲ್ಲ. ಈಗ ಡಾ.ಅಂಬೇಡ್ಕರ್ ಮತ್ತು ಗಾಂಧೀಜಿ ಅವರನ್ನು ಮುಂದೆ ಇಟ್ಟು ಮತ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ನಡೆಸುವ ಅವಕಾಶ ಸಿಕ್ಕಿದೆ. ಜನಪರ ಕೆಲಸಗಳನ್ನು ಒಗ್ಗಟ್ಟಿನಿಂದ ಮಾಡೋಣ, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಬಳಿ ಹೇಳಿಕೊಂಡು ಒಳ್ಳೆಯ ಕೆಲಸಗಳನ್ನು ಮಾಡಿಸಿಕೊಳ್ಳಿ. ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ನಾನು ಸದಾ ಸಿದ್ದ. ಸರ್ಕಾರ ಇರುವುದೇ ಜನರಿಗೆ ಒಳ್ಳೆಯದನ್ನು ಮಾಡಬೇಕು ಎನ್ನುವ ಆಶಯದೊಂದಿಗೆ ಆಡಳಿತ ನಡೆಸುತ್ತದೆ ಎಂದು ಹೇಳಿದರು.
ಸಚಿವರನ್ನು ಸ್ವಾಗತಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶ ಮಾತನಾಡುವ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯಕುಮಾರ್ ಮಾಜಿ ಅಧ್ಯಕ್ಷ ನಾಗಣ್ಣಗೌಡ, ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಡಾ.ಸಿದ್ದ ರಾಮಯ್ಯ, ಜಿಪಂ ಸದಸ್ಯ ಚಂದಗಾಲು ಶಿವಣ್ಣ , ಕೆ.ಎಸ್. ನಂಜುಂಡೇಗೌಡ, ಎಸ್.ಆರ್.ಅರವಿಂದ್ ಇತರರಿದ್ದರು.