Advertisement
ನಗರದ ಕುವೆಂಪುನಗರ ಉದ್ಯಾನ ದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪರಿಸರ ರೂರಲ್ ಡೆವಲೆಪ್ ಮೆಂಟ್ ಸೊಸೈಟಿ, ಯುವ ಮುನ್ನಡೆ, ಮಧುರ ಮಂಡ್ಯ ಲಯನ್ಸ್ ಸಂಸ್ಥೆ, ಎನ್ ಎಸ್‌ಎಸ್ ಘಟಕ (ಸ್ನಾತಕೋತ್ತರ) ಮಹಿಳಾ ಸರ್ಕಾರಿ ಕಾಲೇಜು ವತಿಯಿಂದ ವಿಶ್ವ ಅರಣ್ಯ ದಿನ-ವಿಶ್ವ ಜಲ ದಿನ 2023 ಅಂಗವಾಗಿ ಪರಿಸರ ನಡಿಗೆ, ಮಂಡ್ಯ ನಗರದಲ್ಲಿನ ಕಾವೇರಿ ಶಾಖಾ ನಾಲೆಯ 8ನೇ ವಿತರಣಾ ನಾಲೆಯಲ್ಲಿನ ಸ್ವಚ್ಛತೆ ಬಗ್ಗೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಬೇಕು. ಬಟ್ಟೆ ಬ್ಯಾಗ್ ಬಳಸಬೇಕು ಎಂದು ನಾಗರಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿ, ಮುಂದಿನ ಪೀಳಿಗೆಗೆ ಪರಿಸರ ಉಳಿಸಿದರೆ ಅನುಕೂಲ ಆಗು ತ್ತದೆ ಎಂದು ಅರಿವು ಮೂಡಿಸಿದರು.
Related Articles
Advertisement
ಸಂತೆ ಕಸಲಗೆರೆ ಬಸವರಾಜು ಮತ್ತು ತಂಡದಿಂದ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಗೀತೆಗಳನ್ನು ಹಾಡಿದರು. ಸಾರ್ವ ಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸಲಾಯಿತು. ಕಾವೇರಿ ನೀರಾವರಿ ನಿಗಮ ಸಹಾ ಯಕ ಕಾರ್ಯಪಾಲಕ ಅಭಿಯಂತರ ದೊಡ್ಡ ವೀರಯ್ಯ, ಕಿರಿಯ ಎಂಜಿನಿಯರ್ ಜಿ.ಎನ್.ಕೆಂಪರಾಜು, ಎನ್‌ಎಸ್‌ಎಸ್ ಜಿಲ್ಲಾ ಸಂಯೋಜನಾಧಿಕಾರಿ ಪ್ರೊ.ವೈ. ಕೆ.ಭಾಗ್ಯ, ಪರಿಸರ ರೂರಲ್ ಡೆವಲೆಪ್ ಮೆಂಟ್ ಸೊಸೈಟಿ ಕಾರ್ಯದರ್ಶಿ ಕೆ.ಪಿ.ಅರುಣಕುಮಾರಿ ಹಾಜರಿದ್ದರು.