Advertisement
ಅಪಘಾತ ಮತ್ತಿತರ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ವೈದ್ಯರ ಬಳಿ ಕರೆದೊಯ್ದು ಚಿಕಿತ್ಸೆ ಕೊಡಿಸಲು ವಿಳಂಬ ಮಾಡಬಾರದು. ಮಾಹಿತಿ ಕೊರತೆಯಿಂದ ಬಹಳಷ್ಟು ಸಮಯ ವೈದ್ಯರ ಬಳಿ ಹೋಗಲು ತಡ ಮಾಡುವುದರಿಂದ ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಲು ತೊಂದರೆಯಾಗುವ ಸಾಧ್ಯತೆ ಹೆಚ್ಚು ಇರುತ್ತದೆ. ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ಮಾಡುವ ಬಗ್ಗೆ ಮಾಹಿತಿ ಇರಬೇಕು. ಆದರೆ ಮಾಹಿತಿ ಕೊರತೆಯಿಂದ ಸಾವುಗಳು ಸಂಭವಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
Related Articles
ಶಾಲಾ ಮಕ್ಕಳು ವೀಕ್ಷಿಸಲಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಮಾಜ ಸೇವಕ ಡಾ.ಗುರುರಾಜ್ ಹೆಬ್ಟಾರ್ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಈ ವಸ್ತು ಪ್ರದರ್ಶನವನ್ನು ವೀಕ್ಷಿಸುವಂತಾಗಬೇಕು ಎಂದರು.
Advertisement
ವೈದ್ಯಕೀಯ ಅಧೀಕ್ಷಕ ಡಾ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಹಿಮ್ಸ್ ಆಡಳಿತಾಧಿಕಾರಿ ಕಲ್ಪಶ್ರೀ, ಹಿಮ್ಸ್ ನ ನಿವಾಸಿ ವೈದ್ಯಾಧಿಕಾರಿ ಡಾ. ಪ್ರಸನ್ನ ಕುಮಾರ್, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಿ.ಎನ್, ಶಿವಪ್ರಸಾದ್ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಅಧ್ಯಕ್ಷ ಎಚ್.ಪಿ. ಮೋಹನ್, ಅನನ್ಯ ಟ್ರಸ್ಟ್ ನ ಸಂಸ್ಥಾಪಕಿ ಕೆ.ಟಿ. ಜಯಶ್ರೀ ಸಮಾಜ ಸೇವಕರಾದ ಅಮ್ಜದ್ ಖಾನ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನುರಿತ ವೈದ್ಯರಿಂದ ತರಬೇತಿ: ರೋಗಿಗಳ ಹಾಗೂ ವೈದ್ಯರ ಬಾಂಧವ್ಯ ಉತ್ತಮವಾಗಿದ್ದಾಗ ಮಾತ್ರ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿಮ್ಸ್ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್ ಹೇಳಿದರು. ಸಂಸ್ಥೆಯು ಅನೇಕ ಆರೋಗ್ಯ ಸಂರಕ್ಷಣಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನುರಿತ ವೈದ್ಯರಿಂದ ತರಬೇತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಾರ್ವಜನಿಕರಲ್ಲಿ ತಿಳಿವಳಿಕೆ ಕೊರತೆ, ಮೂಢನಂಬಿಕೆಯಿಂದ ಆರೋಗ್ಯ ನಿರ್ಲಕ್ಷಿಸುತ್ತಾರೆ ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಈ ವಸ್ತು ಪ್ರದರ್ಶನ ಸಹಕಾರಿಯಾಗಿದೆ.-ಸಾವಿತ್ರಿ, ಐಎಂಎ ಹಾಸನ ಶಾಖೆ ಉಪಾಧ್ಯಕ್ಷೆ