Advertisement

ಪಶ್ಚಿಮ ಬಂಗಾಳದ ಜನರು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಭಯಭೀತರಾಗಿದ್ದಾರೆ : ಜಾನ್ ಬಾರ್ಲಾ

09:18 PM Jul 08, 2021 | Team Udayavani |

ನವ ದೆಹಲಿ : ಪಶ್ಚಿಮ ಬಂಗಾಳದ ಜನರು ರಾಜ್ಯ ಸರ್ಕಾರದ ಬಗ್ಗೆ ಅಸಮಾಧಾನವನ್ನು ಹೊಂದಿದ್ದಾರೆ ಹಾಗೂ ಆಡಳಿತದ ಬಗ್ಗೆ ಭಯಭೀತರಾಗಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಶಾಂತಿಯನ್ನು ತರಲಿದೆ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಲಿಪುರ್ದುರ್‌ ನ ಬಿಜೆಪಿ ಸಂಸದ ಜಾನ್ ಬಾರ್ಲಾ ಹೇಳಿದ್ದಾರೆ.

Advertisement

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಸಮ್ಮುಖದಲ್ಲಿ ಬಾರ್ಲಾ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಾರ್ಲಾ, “ನಾನು ನನ್ನ ದೇಶದ ಜನರಿಗೆ, ವಿಶೇಷವಾಗಿ ಚಹಾ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತೇನೆ ನನ್ನ ಕ್ಷೇತ್ರದ ಕಾರ್ಮಿಕರು ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತೇನೆ, ಕ್ಷೇತ್ರದ ಅಭಿವೃದ್ಧಿಯತ್ತ ಹೆಚ್ಚು ಗಮನ ನೀಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ: 3 ಲಾರಿ ಸಹಿತ ಜೆಸಿಬಿ ವಶ

ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ ಬಾರ್ಲಾ, “ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿ ರಾಷ್ಟ್ರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ 2019 ರ ಮೇ ತಿಂಗಳಲ್ಲಿ ರಚನೆಯಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ನಿನ್ನೆ (ಬುಧವಾರ, ಜುಲೈ 7)  ರಾಷ್ಟ್ರಪತಿ ಭವನದಲ್ಲಿ ಕೋವಿಡ್‌-19 ಮಾರ್ಗಸೂಚಿಗೆ ಅನುಗುಣವಾಗಿ ಪ್ರಮಾನ ವಚನ ಸ್ವೀಕಾರ ಸಮಾರಂಭದಲ್ಲಿ. ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

Advertisement

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 3344 ಸೋಂಕಿತರು ಗುಣಮುಖ; 2530 ಹೊಸ ಪ್ರಕರಣ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next