Advertisement

ಕರ್ನಾಟಕ ಉಪಚುನಾವಣೆ ಫಲಿತಾಂಶ; ಜಾರ್ಖಂಡ್ ನಲ್ಲಿ ಪ್ರಧಾನಿ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

09:55 AM Dec 10, 2019 | Team Udayavani |

ಜಾರ್ಖಂಡ್: ಕರ್ನಾಟಕದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕರ್ನಾಟಕದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 12 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 2 ಹಾಗೂ ಪಕ್ಷೇತರ ಅಭ್ಯರ್ಥಿಯೊಬ್ಬರು (ಶರತ್ ಬಚ್ಚೇಗೌಡ) ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಬಹಿರಂಗವಾದ ನಂತರ ಸೋಮವಾರ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದು ಕರ್ನಾಟಕದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಹುಮತ ನೀಡಿದ್ದ ಜನರಿಗೆ ಯಾರು(ಕಾಂಗ್ರೆಸ್-ಜೆಡಿಎಸ್) ಮೋಸ ಮಾಡಿದ್ದಾರೋ ಅವರಿಗೆ ಮತದಾರರು ಪ್ರಜಾಪ್ರಭುತ್ವ ಮಾದರಿಯಲ್ಲಿಯೇ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಜನರು ಇಂದು ಸ್ಪಷ್ಟವಾಗಿ ತೀರ್ಮಾನಿಸಿದ್ದಾರೆ. ಅಷ್ಟೇ ಅಲ್ಲ ಜನರು ಕಾಂಗ್ರೆಸ್ ಪಕ್ಷಕ್ಕೆ ಶಿಕ್ಷೆ ನೀಡಿದ್ದಾರೆ. ಮತದಾರರು ನೀಡಿರುವ ಜನಾದೇಶವನ್ನು ಧಿಕ್ಕರಿಸಿ ಯಾರು ಅಧಿಕಾರಕ್ಕೇರಲು ಪ್ರಯತ್ನಿಸುತ್ತಾರೋ ಈ ನಿಟ್ಟಿನಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಇದೊಂದು ತಕ್ಕ ಪಾಠದ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next