ನವದೆಹಲಿ: ಟಿಆರ್‌ಎಸ್ ಸರ್ಕಾರದ ಬಗ್ಗೆ ತೆಲಂಗಾಣದ ಜನರು ಅಸಮಾಧಾನಗೊಂಡಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷವು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿಶ್ವಾಸ ವ್ಯಕ್ತಪಡಿಸಿದರು.
ಹೈದರಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಮುನ್ನ ಮಾತನಾಡಿದ ಕೇಂದ್ರ ಸಚಿವ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಹಲವು ಮಂದಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತೆಲಂಗಾಣದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದೆ ಆದರೆ ಅವುಗಳ ಅನುಷ್ಠಾನಗೊಳಿಸುವಲ್ಲಿ ಸರಕಾರ ವಿಫಲಗೊಂಡಿದೆ. ಪ್ರತಿ ರಾಜ್ಯದ ಅಭಿವೃದ್ಧಿಗೆ ಮೋದಿ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ ಎಂದರು.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಸರ್ಕಾರದ ಬಗ್ಗೆ ರಾಜ್ಯದ ಜನರು ಅತೃಪ್ತರಾಗಿದ್ದು ಮುಂದಿನ ದಿನಗಳಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
Related Articles
ಇದನ್ನೂ ಓದಿ:ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಮುಂದಿನ ಜುಲೈ 2 ಮತ್ತು 3 ರಂದು ಹೈದರಾಬಾದ್‌ನಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು. ಪ್ರಧಾನಿ ಮೋದಿ ಮತ್ತು ಪಕ್ಷದ ಹಿರಿಯ ನಾಯಕರು ಸೇರಲಿದ್ದಾರೆ. ಪಕ್ಷದ ಸಮಾವೇಶ ಮುಗಿದ ನಂತರ ಜುಲೈ 3 ರಂದು ಸಾರ್ವಜನಿಕ ಸಭೆಯಲ್ಲಿ ಮೋದಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.
ತೆಲಂಗಾಣದಲ್ಲಿ ಮುಂದಿನ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ.