Advertisement
ಸೋಮವಾರ ಮಧ್ಯಾಹ್ನ ಇಲ್ಲಿನ ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ “ಖಬರಸ್ತಾನ’ (ಸ್ಮಶಾನ)ದಲ್ಲಿ ಪತ್ನಿ ಮತ್ತು ಇಬ್ಬರು ಪುತ್ರರ ಸಮಾಧಿ ಜತೆಯಲ್ಲೇ “ದಫನ್’ (ಸಮಾಧಿ) ಮಾಡಲಾಯಿತು. ಇದಕ್ಕೂ ಮುನ್ನ ಸರ್ಕಾರದಿಂದ ಗೌರವ ಸಲ್ಲಿಸಲಾಯಿತು. ಬಳಿಕ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಜನಾಝಾ ನಮಾಜ್ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ಜಾಫರ್ ಷರೀಫ್ ಅವರ ಪಾರ್ಥಿವ ಶರೀರವನ್ನು ಕೆಪಿಸಿಸಿ ಕಚೇರಿಗೆ ತಂದು ಅಂತಿಮ ನಮನ ಸಲ್ಲಿಸಲಾಯಿತು. ಈ ವೇಳೆಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಗುಲಾಂ ನಬಿ ಅಜಾದ್, ಡಿಸಿಎಂ ಡಾ.ಜಿ.ಪರಮೇಶ್ವರ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಕಾಂಗ್ರೆಸ್‌ನ ಹಿರಿಯ ಮತ್ತು ಕಿರಿಯ ನಾಯಕರು ಉಪಸ್ಥಿತರಿದ್ದರು. ನನ್ನ ಮತ್ತು ಜಾಫರ್ ಷರೀಫ್ ಅವರ ರಾಜಕೀಯ ಒಡನಾಟ 40 ವರ್ಷದ್ದು. ದೇಶ, ಪಕ್ಷ ಮತ್ತು ಸಮುದಾಯಕ್ಕೆ ಅವರು ಕೊಟ್ಟ ಕೊಡುಗೆ ಮರೆಯುವಂತಿಲ್ಲ. ಅನೇಕ ಸಂದರ್ಭಗಳಲ್ಲಿ, ಹಲವಾರು ವಿಚಾರಗಳಲ್ಲಿ ಇಬ್ಬರು ಸೇರಿ ತೀರ್ಮಾನ ತೆಗೆದುಕೊಂಡಿದ್ದೆವು.
– ಗುಲಾಂ ನಬಿ ಆಜಾದ್, ರಾಜ್ಯಸಭೆ ಪ್ರತಿಪಕ್ಷ ನಾಯಕ