Advertisement

15 ದಿನದೊಳಗೆ ಜನರ ಸಮಸ್ಯೆ ಪರಿಹಾರ; ಜಿಲ್ಲಾಧಿಕಾರಿ ವೆಂಕಟ್‌ರಾಜಾ

05:29 PM May 28, 2022 | Team Udayavani |

ಶ್ರೀನಿವಾಸಪುರ: ಜನರ ಬಳಿಗೆ ಅಡಳಿತ ಕೊಂಡೊಯ್ಯುವ ಮೂಲಕ ಸ್ಥಳೀಯವಾಗಿ ಆಯಾ ಇಲಾಖೆ ಅಧಿಕಾರಿಗಳು ಹಾಜರಿದ್ದು, ಸಮಸ್ಯೆ ಪರಿಹರಿಸುವ ಮಹತ್ವರ ಕಾರ್ಯಕ್ರಮವೇ ಗ್ರಾಮ ವಾಸ್ತವ್ಯವಾಗಿದೆ. ಗ್ರಾಮದಲ್ಲಿ ಬೇಡಿಕೆ, ಸಮಸ್ಯೆ ಪರಿಹಾರವನ್ನು 15 ದಿನದೊಳಗೆ ಈಡೇರಿಸುವುದಾಗಿ ಕೋಲಾರ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಭರವಸೆ ನೀಡಿದರು.

Advertisement

ತಾಲೂಕಿನ ಸೋಮಯಾಜಲಪಲ್ಲಿ ಗ್ರಾಪಂ ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ, ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ತಮ್ಮ ತಮ್ಮ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸಲಿದ್ದಾರೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕ ರುದ್ರಭೂಮಿಗೆ ರಸ್ತೆ, ಅಂಗನವಾಡಿ ಕಟ್ಟಡ ನಿರ್ಮಾಣ, ವಿದ್ಯುತ್‌ ಪರಿವರ್ತಕ, ಚರಂಡಿ ಸೌಲಭ್ಯ ಇತ್ಯಾದಿಗಳ ಬಗ್ಗೆ ನನ್ನ ಗಮನಕ್ಕೆ ಬರಲಾಗಿದೆ. ತಾವು ಹೇಳಿದ ಕೆಲಸಗಳನ್ನು ಕೆಲವು ಒಂದು ವಾರ ಅಥವಾ 15 ದಿನಗಳೊಳಗೆ ಕಾಮಗಾರಿ ಪ್ರಾರಂಭಿಸಲಾಗುವುದು. ಸೋಮವಾರದಿಂದ ಗ್ರಾಮಕ್ಕೆ ಬಸ್‌ ಬರುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮಗಳಲ್ಲಿ ಮೂಲ ಸೌಲಭ್ಯ ಅಗತ್ಯ: ಗ್ರಾಮಗಳ ಅಭಿವೃದ್ಧಿ ಮತ್ತು ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕುಡಿಯುವ ನೀರು, ರಸ್ತೆ, ಚರಂಡಿ, ವಸತಿ, ಸ್ವತ್ಛತೆ ಗ್ರಾಮಗಳಲ್ಲಿ ಅಗತ್ಯವಿದೆ. ಹೀಗಾಗಿ ಯಾರಿಗೆ ಸೌಲಭ್ಯಗಳು ಸಿಗುತ್ತಿಲ್ಲವೋ ಅವರು ಅರ್ಜಿ ನೀಡಿದರೆ, ಪರಿಹಾರ ಹುಡಕಲಾಗುತ್ತದೆ ಎಂದರು.

ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿ: ಮುಖ್ಯವಾಗಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ಗ್ರಾಮದಲ್ಲಿ ನೀರು ನಿಲ್ಲದಂತೆ ಮಾಡುವುದು, ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್‌ ನಿಷೇಧಕ್ಕಾಗಿ ಜನರು ಜಾಗೃತರಾಗಬೇಕು. ಇದರಿಂದ ಜನರ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಪ್ರತಿ ಕುಟುಂಬ, ಪ್ರತಿ ವ್ಯಕ್ತಿ ಗ್ರಾಮವನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವ ಮೂಲಕ ಈ ಗ್ರಾಮ ಜಿಲ್ಲೆಗೆ ಮಾದರಿಯಾಗಬೇಕು ಎಂದು ಹೇಳಿದರು.

Advertisement

ಅರ್ಜಿಗಳನ್ನು ಇಲಾಖೆ ಅಧಿಕಾರಿಗಳು ಕಾಲಾವಕಾಶದಲ್ಲಿ ಪರಿಹಾರ ನೀಡಲಿದ್ದಾರೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗೆ ಬಂದಿರುವ ಅರ್ಜಿಗಳನ್ನು ತ್ವರಿತಗತವಾಗಿ ಪರಿಶೀಲಿಸಿ, ವಿಲೇವಾರಿ ಮಾಡಬೇಕು ಎಂದು ಹೇಳಿದರು. ತಹಶೀಲ್ದಾರ್‌ ಶಿರೀನ್‌ ತಾಜ್‌, ತಾಪಂ ಇಒ ಎಸ್‌. ಆನಂದ್‌, ಸೋಮಯಾಜಲಹಳ್ಳಿ ಗ್ರಾಪಂ ಅಧ್ಯಕ್ಷೆ ವಂದನಾ, ಪಿಡಿಒ ಸುಬ್ರಮಣಿ, ಶಿವಕುಮಾರ್‌, ಎಂ.ಶ್ರೀನಿವಾಸನ್‌, ಕೃಷ್ಣಪ್ಪ, ಮಂಜುನಾಥ ರೆಡ್ಡಿ, ಜಗದೀಶ್‌, ಮುನಿರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ಗ್ರಾಮದಲ್ಲಿ ನೀರು ನಿಲ್ಲದಂತೆ ಮಾಡುವುದು, ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್‌ ನಿಷೇಧಕ್ಕಾಗಿ ಜನರು ಜಾಗೃತರಾಗಬೇಕು. ಇದರಿಂದ ಜನರ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಪ್ರತಿ ಕುಟುಂಬ, ಪ್ರತಿ ವ್ಯಕ್ತಿ ಗ್ರಾಮವನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವ ಮೂಲಕ ಈ ಗ್ರಾಮ ಜಿಲ್ಲೆಗೆ ಮಾದರಿಯಾಗಬೇಕು.
ವೆಂಕಟ್‌ರಾಜಾ, ಕೋಲಾರ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next