Advertisement

ಸರ್ಕಾರದ ವಿರುದ್ಧ  ಜನ ದಂಗೆ ಏಳ್ತಾರೆ: ಬಿಎಸ್‌ವೈ

01:40 AM Mar 04, 2019 | |

ಮೈಸೂರು: ಕೇವಲ ನಾಲ್ಕೈದು ಜಿಲ್ಲೆಗಳಿಗೆ ಸೀಮಿತವಾಗಿರುವ ಸಮ್ಮಿಶ್ರ ಸರ್ಕಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಆದರೂ, ಬಜೆಟ್‌ನಲ್ಲಿ ಘೋಷಣೆಯಾದ ಕಾರ್ಯಕ್ರಮಗಳ ಹಣವನ್ನು ಜಾಹೀರಾತು ನೀಡಲು  ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದರು.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವರ್ಗಾವಣೆಯನ್ನು ದಂಧೆಯಾಗಿಸಿಕೊಂಡಿರುವ ಈ ಸರ್ಕಾರ, ಸರ್ಕಾರಿ ನೌಕರರನ್ನು ಜಾತಿ, ಒಳ ಜಾತಿಗಳ ಮೇಲೆ ಒಡೆದು ಆಳ್ವಿಕೆ ಮಾಡುತ್ತಿರುವುದು ಸರ್ಕಾರಕ್ಕೆ ಶೋಭೆಯಲ್ಲ. ಮುಖ್ಯಮಂತ್ರಿ ಯಾದವರು ಈ ರೀತಿಯ ಕೆಲಸವನ್ನು ಮಾಡಬಾರದು. ಅದು ಸಮಾಜದ ವಿಶ್ವಾಸಕ್ಕೆ ದ್ರೋಹ ಬಗೆದಂತಾಗುತ್ತದೆ. ಕೂಡಲೇ ರಾಜ್ಯದ ಸಮ್ಮಿಶ್ರ ಸರ್ಕಾರ ತನ್ನ ಆಡಳಿತ ವೈಖರಿಯನ್ನು ಬದಲಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ಜನರು ಸರ್ಕಾರದ ವಿರುದಟಛಿ ದಂಗೆ ಏಳುವ ದಿನಗಳು ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಈಗಾಗಲೇ ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಜನರು ಬಿಜೆಪಿ ಕಡೆ ಒಲವು ಹೊಂದಿದ್ದಾರೆ. ಹೀಗಾಗಿ, ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವುಸಾಧಿಸಲಿದ್ದೇವೆ. 2014ರಂತೆಯೇ ಈ ಬಾರಿಯೂ ದೇಶದಲ್ಲಿ ಮೋದಿ ಅಲೆ ಇದೆ. ಹೀಗಾಗಿ, ಬಿಜೆಪಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next