Advertisement

ಕಡೂರು: ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರು!

12:38 PM Aug 09, 2022 | Team Udayavani |

ಚಿಕ್ಕಮಗಳೂರು: ರಸ್ತೆಯ ಮೇಲೆ ಐದು ಅಡಿಗಿಂತಲೂ ಹೆಚ್ಚಿನ ನೀರು ಹರಿಯುತ್ತಿದ್ದರೂ ಹುಚ್ಚಾಟ ಮಾಡಿ ಅದರಲ್ಲಿ ಕಾರು ಚಲಾಯಿಸಿ ಸಂಕಷ್ಟಕ್ಕೆ ಸಿಲುಕಿದ್ದವರನ್ನು ಸ್ಥಳೀಯರು ಪಾರು ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ಸಂಭವಿಸಿದೆ.

Advertisement

ಇಲ್ಲಿನ ರಸ್ತೆ ಮೇಲೆ ಐದಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಇದನ್ನು ಲೆಕ್ಕಿಸದೇ ಕಾರು ಚಲಾಯಿಸಿದ್ದಾರೆ. ಆದರೆ ನಿಯಂತ್ರಣ ತಪ್ಪಿ ಕಾರು ಕೊಚ್ಚಿ ಹೋಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮಹಿಳೆ ಜತೆ ಅಸಭ್ಯ ವರ್ತನೆ: ಪರಾರಿಯಾಗಿದ್ದ ಸ್ವಯಂಘೋಷಿತ ಬಿಜೆಪಿ ಮುಖಂಡ ತ್ಯಾಗಿ ಬಂಧನ

ಕಾರಿನ ಗಾಜು ಒಡೆದು, ಹಗ್ಗ ಕಟ್ಟಿ ಜೆಸಿಬಿ ಮೂಲಕ ಕಾರನ್ನು ಎಳೆದು ಅದರಲ್ಲಿದ್ದ ಇಬ್ಬರ ರಕ್ಷಣೆ ಮಾಡಿದ್ದಾರೆ.  ಸ್ಥಳೀಯರ ಸಮಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next