Advertisement

ಪಕ್ಷಾಂತರಿಗಳನ್ನು ಜನರು ಸೋಲಿಸಬೇಕು : ಸಿದ್ದರಾಮಯ್ಯ

09:53 AM Nov 12, 2019 | sudhir |

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ರಾಜ್ಯ ಜನರು ಪಕ್ಷಾಂತರಿಗಳನ್ನು ಸೋಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರೋಧಿಸಿ ಕೆಪಿಸಿಸಿ ವತಿಯಿಂದ ನಗರದ ಟೌನ್‌ ಹಾಲ್‌ ಎದುರು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಛಲಗಾರ, ಜನನಾಯಕ ಎಂದು ಪ್ರತಿದಿನ ಜಾಹಿರಾತು ಕೊಡುತ್ತಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಡಿಸೆಂಬರ್‌ 5 ರಂದು ನಡೆಯುವ ಉಪ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಸೋಲಿಸಿ ಜನರು ಪಾಠ ಕಲಿಸಬೇಕು. 15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕನಿಷ್ಠ 12 ಕ್ಷೇತ್ರಗಳಲ್ಲಿ ಜಯ ಗಳಿಸುತ್ತದೆ ಎಂದು ಹೇಳಿದರು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರ 2014 ರಲ್ಲಿ ಜನರಿಗೆ ನೀಡಿದ್ದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಹಣ ವರ್ಗಾವಣೆ, ಕಪ್ಪು ಹಣ ವಾಪಸ್‌ ತರುವುದು. ಪೆಟ್ರೋಲ್‌ ಡಿಸೇಲ್‌ ಬೆಲೆ ಕಡಿತ, ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಯಾವುದೇ ಭರವಸೆಯನ್ನು ಈಡೇರಿಸದೇ ಲೋಕಸಭೆ ಚುನಾವಣೆಯಲ್ಲಿ ದೇಶ ರಕ್ಷಣೆಯಂತ ಭಾವನಾತ್ಮಕವ ವಿಷಯ, ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ, ತ್ರಿವಳಿ ತಲಾಖ್‌ ರದ್ದುಪಡಿಸುವುದು, ಧರ್ಮ ಧರ್ಮಗಳನ್ನು ಒಡೆದು ಆಳುವುದು. ರಾಮಮಂದಿರದಂತಹ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ್ತೆ ಅಧಿಕಾರಕ್ಕೆ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಿರುದ್ಯೋಗ, ಬಡತನ, ಸಾಮರಸ್ಯ, ಕೃಷಿ, ಶಿಕ್ಷಣದಂತಹ ವಿಷಯಗಳಿಗೆ ಆದ್ಯತೆ ನೀಡದೇ 370 ವಿಧಿ ರದ್ದತಿ, ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ, ವಿದೇಶಿ ಪೌರತ್ವ, ಆರ್‌ಸಿಇಪಿಯಂತಹ ವಿಷಯಗಳನ್ನು ಪ್ರಸ್ತಾಪಿಸಿ ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಆಗುವಂತೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಯಿಂದ ದೇಶದ ಜಿಡಿಪಿ ಶೇ. 6 ಕ್ಕಿಂತಲೂ ಕಡಿಮೆಯಾಗಿದೆ. ಅಟೊಮೊಬೈಲ್‌ ಕ್ಷೇತ್ರ ನೆಲಕಚ್ಚಿದೆ. ಡಾಲರ್‌ ಮುಂದೆ ರೂಪಾಯಿ ಮೌಲ್ಯ ಕಡಿಮೆಯಾಗಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

Advertisement

ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದು, ಜನವಿರೋಧಿ ಪ್ರವೃತ್ತಿಯನ್ನು ಕೈ ಬಿಟ್ಟು,ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next