Advertisement

ಜನರು ಆತಂಕ ಪಡುವುದು ಬೇಡ: ಶಾಸಕ ಯಾದವಾಡ

10:13 AM Sep 08, 2019 | Suhan S |

ರಾಮದುರ್ಗ: ಖಾನಾಪುರ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದಾ ನದಿ ಪಾತ್ರದ ಜನತೆ ಮತ್ತೋಮ್ಮೆ ಪ್ರವಾಹದ ಭೀತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಬಂದಿದ್ದು, ಜನತೆ ಆತಂಕ ಪಡುವುದು ಬೇಡ ಎಂದು ಶಾಸಕ ಮಹಾದೇವಪ್ಪ ಯಾದವಾಡ ಧೈರ್ಯ ಹೇಳಿದರು.

Advertisement

ಮಲಪ್ರಭಾ ನದಿಗೆ 18 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರು ಹರಿಬಿಟ್ಟ ಕಾರಣ ಮತ್ತೆ ಪ್ರವಾಹ ಪರಿಸ್ಥಿತಿ ಉದ್ಭವಗೊಂಡ ಹಿನ್ನೆಲೆಯಲ್ಲಿ ಹಲಗತ್ತಿ, ಸುನ್ನಾಳ, ಹಾಲೋಳ್ಳಿ ಹಾಗೂ ಹಳೆತೋರಗಲ್ಲ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿದರು. ನದಿ ಪಾತ್ರದಲ್ಲಿರುವ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ತಾತ್ಕಾಲಿಕ ಜೀವನ ನಡೆಸಲು ಬೇಕಾದ ಅವಶ್ಯಕ ಸೌಲಭ್ಯಗಳನ್ನು ಒದಗಿಸಲು ತಾಲೂಕಿನ ಅಧಿಕಾರಿಗಳಗೆ ಸೂಚನೆ ನೀಡಲಾಗಿದೆ. ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಖಾನಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.

ರವಿವಾರ ಸುಮಾರು 20 ಸಾವಿರ ಕ್ಯೂಸೆಕ್‌ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿರುವ ಜನತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಮಾರುತಿ ತುಪ್ಪದ, ಬಿಜೆಪಿ ತಾಲೂಕಾಧ್ಯಕ್ಷ ಜಿ.ಜಿ. ಪಾಟೀಲ, ಮಹಾದೇವ ಚಿನ್ನಾಕಟ್ಟಿ, ಎಲ್.ಬಿ.ಕಿತ್ತೂರ ಸೇರಿದಂತೆ ಇದ್ದರು.

ಉಜ್ಜಿನಕೊಪ್ಪ ಗ್ರಾಮದ ಹತ್ತಿರದ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆಯ ದುರಸ್ತಿ ಕಾಮಗಾರಿಯನ್ನು ಶಾಸಕ ಮಹಾದೇವಪ್ಪ ಯಾದವಾಡ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಭೆೇಟಿ ನೀಡಿ ಪರಿಶೀಲಿಸಿದರು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸ‌ಬೇಕೆಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next