Advertisement

Air Lift : ನೆರೆಯಲ್ಲಿ ಸಿಲುಕಿದ್ದವರ ರೋಮಾಂಚಕ ರಕ್ಷಣಾ ಕಾರ್ಯಾಚರಣೆ

11:11 AM Aug 20, 2019 | Hari Prasad |

ಜಮ್ಮು: ಇಲ್ಲಿನ ತಾವೀ ನದಿಯಲ್ಲಿ ಏಕಾ ಏಕಿ ನೀರಿನ ಮಟ್ಟ ಏರಿಕೆಯಾದ ಕಾರಣ ನದಿ ದಂಡೆಯಲ್ಲಿ ಸಿಲುಕಿಕೊಂಡಿದ್ದವರನ್ನು ವಾಯುಪಡೆಯ ಹೆಲಿಕಾಫ್ಟರ್ ಮೂಲಕ ರಕ್ಷಿಸಲಾಯಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Advertisement

ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದರ ಕಂಬಗಳ ಹತ್ತಿರ ಇದ್ದ ಸಿಮೆಂಟ್ ಕಟ್ಟೆಯ ಮೇಲೆ ಇಬ್ಬರು ಕುಳಿತಿದ್ದ ಸಂದರ್ಭದಲ್ಲಿ ನದಿಯಲ್ಲಿ ನೀರಿನ ಮಟ್ಟ ಏಕಾ ಏಕಿ ಹೆಚ್ಚಾಗಲಾರಂಭಿಸಿದೆ.

ಆ ಸಂದರ್ಭದಲ್ಲಿ ಭಯಗೊಂಡ ಅವರು ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ. ಅದರಂತೆ ಪ್ರವಾಹ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಸೇನೆಯ ಹೆಲಿಕಾಫ್ಟರ್ ಸ್ಥಳಕ್ಕೆ ಬಂದು ಇಬ್ಬರನ್ನು ರಕ್ಷಿಸಿದೆ. ಈ ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರಬಹುದಾದ ಶಂಕೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next