Advertisement

Karnataka Polls 2023: ಜನ ಬದಲಾವಣೆ ಬಯಸಿದ್ದಾರೆ: ಸಿದ್ಧರಾಮಯ್ಯ

11:50 PM Apr 24, 2023 | Team Udayavani |

ಗೋಕಾಕ್‌: ರಾಜ್ಯದ ಜನತೆ ಬದಲಾವಣೆ ಬಯಸಿದ್ದು, ಎಲ್ಲ ಕಡೆ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ಸಿದ್ಧರಾಮಯ್ಯ ಹೇಳಿದರು.

Advertisement

ಸೋಮವಾರ ನಗರದಲ್ಲಿ ಕಾಂಗ್ರೆಸ್‌ ಪಕ್ಷದವರು ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿರುವ ಬಿಜೆಪಿ ಸರಕಾರ ಜನ ವಿರೋಧಿ ಹಾಗೂ ಭ್ರಷ್ಟವಾಗಿದ್ದು, ಇದನ್ನು ಬದಲಿಸಿ ಕಾಂಗ್ರೆಸ್‌ ಸರಕಾರವನ್ನು ಅಧಿಕಾರಕ್ಕೆ ತರುವದು ರಾಜ್ಯದ ಜನತೆಯ ಅಭಿಲಾಷೆಯಾಗಿದೆ. ನನ್ನ ಐದು ವರ್ಷಗಳ ಆಡಳಿತದಲ್ಲಿ ಜನಪರ ಕಾರ್ಯಕ್ರಮಗಳನ್ನು ಎಲ್ಲ ಸಮಾಜದ ಬಡ ಜನರಿಗೆ ಕೊಟ್ಟಿದ್ದೇನೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತ ಜನಸ್ನೇಹಿ ಸರಕಾರವನ್ನು ಕಾಂಗ್ರೆಸ್‌ ಪಕ್ಷ ಈ ಹಿಂದೆ ನೀಡಿದ್ದು, ಅಂತಹ ಸರಕಾರ ಮತ್ತೊಮ್ಮೆ ಬೇಕಾಗಿದೆ.

ರಾಜಕೀಯ ಅಧಿಕಾರಕ್ಕಿಂತ ಜನಸೇವೆ ಆಗಬೇಕು. ಶಿಕ್ಷಣ, ಕೈಗಾರಿಕೆ, ನೀರಾವರಿ ಯೋಜನೆಗಳು ಜಾರಿಯಾಗಬೇಕಾದರೆ ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವದಿಸಿ ಎಂದರು.

Advertisement

ಮಾಜಿ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಕೆಟ್ಟ ಕಾಲ ಬಂದಿದ್ದು, ಕೆಟ್ಟ ನಿರ್ಣಯಗಳನ್ನು ತೆಗೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಕಡಿಮೆ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗುವುದು ನಿಶ್ಚಿತ. ಕಾಂಗ್ರೆಸ್‌ ಪಕ್ಷ ಬಹುಮತದೊಂದಿಗೆ ಸರಕಾರ ರಚಿಸಲಿದೆ ಎಂದರು. ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಹಾಂತೇಶ ಕಡಾಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರಿದ್ದರು.

ಲಿಂಗಾಯತ ಸಮುದಾಯ ಬಗ್ಗೆ ನನಗೆ ಅಪಾರ ಗೌರವವಿದ್ದು ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಬಸವರಾಜ ಬೊಮ್ಮಾಯಿ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂದು ಮಾತ್ರ ಹೇಳಿದ್ದೇನೆ. ಅದನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ರಾಜ್ಯದಲ್ಲಿ 150 ಸ್ಥಾನದೊಂದಿಗೆ ಕಾಂಗ್ರೆಸ್‌ ಅ ಕಾರಕ್ಕೆ ಬರುವದು ನಿಶ್ಚಿತ.
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next