Advertisement

ಜನ ಪರಿವರ್ತನೆ ಬಯಸುತ್ತಿದ್ದಾರೆ

11:49 AM Apr 29, 2018 | Team Udayavani |

ಬೆಂಗಳೂರು: ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಮುನಿರಾಜು ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶನಿವಾರ ಮತಯಾಚನೆ ಮಾಡಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌.ಮುನಿರಾಜು, ನನ್ನ ಕ್ಷೇತ್ರ ದಾಸರಹಳ್ಳಿ, ಉಸಿರು ಇವರುವರೆಗೂ ದಾಸರಹಳ್ಳಿ ಬಿಟ್ಟು ಹೋಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.

ದಾಸರಹಳ್ಳಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಮತದಾರರೇ ಶಕ್ತಿ ತುಂಬ ಬೇಕು. ಮತದಾನದ ದಿನ ಬೆಳಗ್ಗೆ 7 ಗಂಟೆಯಿಂದಲೇ ಮತಗಟ್ಟೆಗೆ ಬಂದು ಬಿಜೆಪಿಗೆ ಮತ ಹಾಕಬೇಕು. ಈ ಕ್ಷೇತ್ರದ ಸಮಸ್ಯೆಗೆ ಮುಕ್ತಿ ನೀಡಿ ಇನ್ನಷ್ಟು ಅಭಿವೃದ್ಧಿ ಮಾಡಲಿದ್ದೇನೆ ಎಂದು ಭರವಸೆ ನೀಡಿದರು.

ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಅದೇ ರೀತಿ ವಿಧಾನಸಭಾ ಕ್ಷೇತ್ರವೂ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುನಿರಾಜು ಪರ ಪ್ರಚಾರ ಮಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಮೇ. 12ಕ್ಕೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಪರಿವರ್ತನೆಯನ್ನು ಜನ ಬಯಸುತ್ತಿದ್ದಾರೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುನಿರಾಜು ಅವರು ಶಾಸಕರಾಗಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚು ಅನುದಾನ ತಂದಿದ್ದಾರೆ ಎಂದರು.

Advertisement

10 ವರ್ಷದ ಹಿಂದಿನ ದಾಸರಹಳ್ಳಿ ಮತ್ತು ಇಂದಿನ ದಾಸರಹಳ್ಳಿಗೆ ಸಾಕಷ್ಟು ವ್ಯತ್ಯಾಸ ಇದೆ, ಅಭಿವೃದ್ಧಿ ಕೆಲಸಗಳು ಕಾಣಿಸುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಕ್ರದೃಷ್ಟಿ ದಾಸರಹಳ್ಳಿ ಮೇಲೆ  ಬಿದ್ದಿತ್ತು. ಆದರೂ, ಕೆರೆಗಳ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಬೇಕಾದ ಅನುದಾನವನ್ನು ಶಾಸಕ ಮುನಿರಾಜು ಅವರು ತಂದಿದ್ದಾರೆ. ಅವರು ಮತ್ತೂಮ್ಮೆ ಶಾಸಕರಾಗಬೇಕು ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಯನ್ನೇ ಗುರಿಯಾಗಿಟ್ಟುಕೊಂಡು ಮುನಿರಾಜು ಅವರು ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದಾಸರಹಳ್ಳಿ ಕ್ಷೇತ್ರದಿಂದ ಬಿಜೆಪಿಗೆ 65 ಸಾವಿರ ಮತ ಸಿಕ್ಕಿತ್ತು. ಇದರ ಫ‌ಲವಾಗಿಯೇ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕಿದೆ. ಅದಕ್ಕೆ ಕ್ಷೇತ್ರದ ಮತದಾರರೇ ಕಾರಣ ಎಂದು ಹೇಳಿದರು.

ರಾಜ್ಯ ಸರ್ಕಾರ ಕೊಳ್ಳೆ ಹೊಡೆಯುತ್ತಿದೆ. ಬೆಂಗಳೂರಿನಲ್ಲಿ ಮಳೆಯಿಂದ ಆದ ಅವಾಂತರ, ಕೊಲೆ, ಸೂಲಿಗೆ, ಅತ್ಯಾಚಾರ, ದೌರ್ಜನ್ಯ ಇತ್ಯಾದಿ ನಿರಂತರವಾಗಿದೆ. ಎಲ್ಲೆಡೆ ಜನರು ಬದಲಾವಣೆ ಬಯಸುತ್ತಿದ್ದಾರೆ. ಪ್ರತಿ ಬೂತ್‌ನಲ್ಲೂ ಗರಿಷ್ಠ ಮತದಾನ ಬಿಜೆಪಿ ಪರವಾಗಿ ಆಗಬೇಕು. ನಿಮ್ಮ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಸೇವೆ ಸಲ್ಲಿಸಲಿದ್ದೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next