Advertisement

ಸೋಂಕಿನಿಂದ ಗುಣಮುಖ: ಬೆಳಗಾವಿಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸ್ವಾಗತ

01:41 PM Aug 03, 2020 | keerthan |

ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್‌ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

Advertisement

ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು.

ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ‌ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್​​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ‌ ನಿನ್ನೆ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಖಡಕ್ ಗಲ್ಲಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗೆ ರಿಬ್ಬನ್ ಕತ್ತರಿಸಿ ಒಳಗೆ ಪ್ರವೇಶ ನೀಡಲಾಯಿತು.

ಬಿಡುಗಡೆಯಾದ ಹಿನ್ನೆಲೆಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಮನೆಗೆ ಯುವಕ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಸ್ವಾಗತ ಮಾಡಿಕೊಂಡರು

Advertisement

Udayavani is now on Telegram. Click here to join our channel and stay updated with the latest news.

Next