Advertisement
ಹೀಗಾಗಿ ಕಾಂಗ್ರೆಸ್‌ಗೆ ಈ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ.
Related Articles
Advertisement
ಕಾಂಗ್ರೆಸಿಗೆ ಚುನಾವಣೆ ಗೆಲ್ಲಲು ಗ್ಯಾರಂಟಿಗಳೇ ಆಧಾರವಾದರೆ ಬಿಜೆಪಿ ಅಭಿವೃದ್ಧಿ, ದೇಶದ ಹಿತದೃಷ್ಟಿ, ವಿಶ್ವ ಗುರುವಾಗುವತ್ತ ದೃಷ್ಟಿ ನೆಟ್ಟಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೆರಚಿದೆ ಎಂದು ಹೇಳಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಯಂತೆ ಕೈಗಾರೀಕರಣ ಮತ್ತು ನಗರೀಕರಣದ ಮೂಲಕ ಸೊÌàದ್ಯೋಗ ಸೃಷ್ಟಿಸಿ ಆತ್ಮನಿರ್ಭರ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ. ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು, ಅನು ದಾನವನ್ನು ನೀಡಿದ್ದರು. ನಾವೆಲ್ಲರೂ ಒಟ್ಟಾಗಿ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದರು.
ಕೋಟ ಶ್ರೀನಿವಾಸ ಪೂಜಾರಿಯವರು ಭಾಗವಹಿಸಿ, ಇದು ದೇಶದ ಅಧಿಕಾರ ಹಿಡಿಯುವ ಚುನಾವಣೆ. 10 ವರ್ಷದಲ್ಲಿ ದೇಶದಲ್ಲಿ ಆಗಿರುವ ಅಭಿವೃದ್ಧಿ, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಗಮನಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ಎಸ್. ನಾರಾಯಣ್, ಗೋಪಾಲ ಕಳಂಜ, ಕೃಷ್ಣಮೂರ್ತಿ, ಸದಾನಂದ ಬ್ರಹ್ಮಾವರ, ಅಜಿತ್ ಕಪ್ಪೆಟ್ಟು, ಸಂಜೀವ ಕಾರ್ಕಳ, ಮಂಜು ಉಪಸ್ಥಿತರಿದ್ದರು.
ಎಸ್ಸಿ ಮೋರ್ಚಾ ರಾಜ್ಯ ಪ್ರ. ಕಾರ್ಯದರ್ಶಿ ದಿನಕರ ಬಾಬು ಪ್ರಸ್ತಾವನೆಗೈದರು. ಸಂತೋಷ್ ನಿರೂಪಿಸಿದರು. ಜಿಲ್ಲಾಧ್ಯಕ್ಷ ಚಂದ್ರ ಪಂಚವಟಿ ಸ್ವಾಗತಿಸಿದರು.
ಓಟ್‌ಬ್ಯಾಂಕ್‌ಗಾಗಿ ಕಾಂಗ್ರೆಸ್ ಓಲೈಕೆದಲಿತರು, ಹಿಂದುಳಿದವರನ್ನು ಓಟ್ ಬ್ಯಾಂಕ್‌ಗಾಗಿ ಬಳಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನಂತರದಲ್ಲಿ ಆ ಸಮುದಾಯವನ್ನು ನಿರ್ಲಕ್ಷಿಸಿ, ಒಂದು ಕೋಮಿನ ಓಲೈಕೆ ಮಾಡುತ್ತಿದೆ. ಗ್ಯಾರಂಟಿಗಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿದ್ದ 11,144 ಕೋಟಿ ರೂ. ಮೊತ್ತವನ್ನು ವರ್ಗಾಯಿಸಿ ಅನ್ಯಾಯವೆಸಗಿದೆ. ಇದಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.