Advertisement

“ಜನರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕೈ ಸರ್ಕಾರ’

11:43 AM Jan 21, 2017 | Team Udayavani |

ಕೆಂಗೇರಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರ‌ವರ ಮಾರ್ಗದರ್ಶನದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಸಾಮಾನ್ಯರ ಬದುಕಿನ ಬದಲಾವಣೆಗೆ ನಮ್ಮ ಸರಕಾರ ಪ್ರಮಾಣಿಕ ಪ್ರಯತ್ನ ನಡೆಸಿ ಜನರ ಹಿತಕ್ಕಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕಾಪಾಡುವುದೇ ಧ್ಯೇಯವಾಗಿದೆ ಎಂದ‌ು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಕೆಂಗೇರಿಯ ಕೃಷ್ಣಪ್ರಿಯಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ ಬಂದು 6 ದಶಕಗಳು ಕಳೆದರೂ ನಿರೀಕ್ಷೆಗೆ ತಕ್ಕಂತೆ ಬಡವರು, ಹಿಂದುಳಿದವರು ಹಾಗೂ ದಲಿತರ ಬದುಕು ಬದಲಾವಣೆಯಾಗಿಲ್ಲ. ಆ ಕಾರಣಕ್ಕಾಗಿ ನಮ್ಮ ಸರ್ಕಾರ ಈ ಎಲ್ಲ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಬಡವರ ಬದುಕಿನ ಉನ್ನತೀಕರಣಕ್ಕಾಗಿ ಶ್ರಮಿಸಿ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ನಂತರ ನಡೆದ ಫ‌ಲಾನುಭವಿಗಳೊಂದಿಗಿನ ಸಂವಾದದಲ್ಲಿ ಬಹಳಷ್ಟು ಪಡಿತರದಾರರು ಒಂದು ಕುಟುಂಬಕ್ಕೆ ಹಿಂದಿನಂತೆ 30 ಕೇಜಿ ಅಕ್ಕಿ ವಿತರಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಕೂಪನ್‌ ಬದಲು ನೇರವಾಗಿ ಪಡಿತರ ವಿತರಣೆ ಮಾಡಬೇಕು, ಜನರ ಆರೋಗ್ಯದ ದೃಷ್ಟಿಯಿಂದ ಸೊಸೈಟಿಗಳಲ್ಲಿ ಸಿರಿ ಧಾನ್ಯ ವಿತರಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬಿಪಿಎಲ್‌ ಕಾರ್ಡುಗಳು ಶ್ರೀಮಂತರ ಪಾಲಾಗುತ್ತಿವೆ. ಅರ್ಹರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದರು. ವಿದ್ಯಾಸಿರಿ ಯೋಜನೆಯ ಫ‌ಲಾನುಭವಿಗಳು ಮಾತನಾಡಿ, ಯೋಜನೆಗೆ ನೀಡುವ ಹಣ ನಗರದ ದುಭಾರಿ ಜೀವನಕ್ಕೆ ಸಾಕಾಗುವುದಿಲ್ಲ. ಅದನ್ನು ನಗರದ ಬೆಲೆಗೆ ತಕ್ಕಂತೆ ಹೆಚ್ಚಿಸಬೇಕೆಂದು ಮನವಿ ಮಾಡಿದರು. ಕ್ಷೀರಧಾರೆ, ಕೃಷಿ ಭಾಗ್ಯ, ಮೈತ್ರಿ, ಋಣ ಮುಕ್ತ ಫ‌ಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು.

Advertisement

ಇವೆಲ್ಲದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್‌, ಕೃಷಿ ಸಚಿವ, ಉನ್ನತ ಶಿಕ್ಷಣ ಸಚಿವ, ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಿ ಧೃಡ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್‌ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಟಿ.ಸೋಮಶೇಖರ್‌, ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಬಿಬಿಎಂಪಿ ಸದಸ್ಯ ಆರ್ಯಶ್ರೀನಿವಾಸ್‌, ಜಿಲ್ಲಾಧಿಕಾರಿ ವಿ.ಶಂಕರ್‌, ಅಪರ ಜಿಲ್ಲಾಧಿಕಾರಿ ಕಾಂತರಾಜು, ಬೆಂಗಳೂರು ನಗರ ಜಿಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ದೇವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next