Advertisement
ರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ವೇಳೆ ಬಿಬಿಎಂಪಿ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಹೆಚ್ಚಿನ ಜನರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಕೆಲವೆಡೆ ಸಾರ್ವಜನಿಕರು ಮತಗಟ್ಟೆಗಳಲ್ಲೇ ಅಧಿಕಾರಗಳೊಂದಿಗೆ ವಾಗ್ವಾದ ನಡೆಸಿದ್ದರು.
Related Articles
Advertisement
ಪಕ್ಷಗಳಿಗೆ ಮೊದಲೇ ಪಟ್ಟಿ ನೀಡಲಾಗಿತ್ತು: ಆಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ಆಯೋಗದಿಂದ ಎರಡು ಮೂರು ಬಾರಿ ಮತದಾರರ ಪಟ್ಟಿ ಪ್ರಕಟಿಸಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯಿಂದ ತೆಗೆದವರ ವಿವರ ಹಾಗೂ ಅಂತಿಮ ಪಟ್ಟಿ ನೀಡಲಾಗಿತ್ತು. ಆಗ ಯಾವುದೇ ಚಕಾರವೆತ್ತದೆ ಚುನಾವಣೆ ದಿನ ಆರೋಪಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣಾ ಆಯೋಗದಿಂದ ಯಾವುದೇ ಮತದಾರರ ಹೆಸರನ್ನು ಏಕಾಏಕಿ ತೆಗೆದಿಲ್ಲ. ಬದಲಿಗೆ ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಕ್ಕ-ಪಕ್ಕದವರಿಂದ ಮಾಹಿತಿ ಪಡೆದ ನಂತರವೇ ಹೆಸರುಗಳನ್ನು ತೆಗೆದಿದ್ದಾರೆ. ಅದರ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಂದ ಸುಮಾರು 2 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಆಯೋಗದಿಂದ 2018ರಲ್ಲಿಯೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ನಂತರ ಹಲವು ಬಾರಿ ಪರಿಷ್ಕರಣೆ ಮಾಡಲಾಗಿತ್ತು. ಜ.16ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬಳಿಕ ಯಾವುದೇ ಹೆಸರುಗಳನ್ನು ಪಟ್ಟಿಯಿಂದ ತೆಗೆದಿಲ್ಲ. ಆ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿತ್ತು ಎಂದು ಹೇಳಿದರು.